







ಪುತ್ತೂರು: ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಪ್ರಸಕ್ತ ಶೈಕ್ಷಣಿಕ ವರ್ಷದ ಮೊದಲನೇ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ ಜು.4ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.


ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹ ಅವರು ಸಭಾಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಭಗಿನಿ ಲೋರ ಪಾಯಸ್, 2025-26ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಶ್ರೀ ಮುಕೇಶ್ ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು.




ಪ್ರಾರ್ಥನಾ ಗೀತೆಯೊಂದಿಗೆ ಆರಂಭವಾದ ಸಭೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಭಗಿನಿ ಲೋರ ಪಾಯಸ್ ಅವರು ಶಾಲೆಯ ನಿಯಮಗಳು ಹಾಗೂ ಶಿಸ್ತು-ಸಂಸ್ಕಾರದ ಕುರಿತು ಪೋಷಕರಿಗೆ ಮಾಹಿತಿ ನೀಡಿದರು. ಅಧ್ಯಕ್ಷೀಯ ಭಾಷಣದಲ್ಲಿ ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹ ಅವರು ಪೋಷಕರು ಮತ್ತು ಮಕ್ಕಳ ನಡುವಿನ ಸಂಬಂಧವನ್ನು ಗಟ್ಟಿಗೊಳಿಸುವುದು, ಮಾದಕ ದ್ರವ್ಯಗಳು ಹಾಗೂ ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳನ್ನು ದೂರವಿಡುವ ಬಗ್ಗೆ ಜಾಗೃತಿ ಮೂಡಿಸಿದರು.
ಹೊಸ ಪದಾಧಿಕಾರಿಗಳ ಆಯ್ಕೆ
2026-27ನೇ ಶೈಕ್ಷಣಿಕ ಸಾಲಿನ ರಕ್ಷಕ-ಶಿಕ್ಷಕ ಸಂಘಕ್ಕೆ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷ: ಲ್ಯಾನ್ಸಿ ಮಸ್ಕರೇನಸ್
ಜಂಟಿ ಕಾರ್ಯದರ್ಶಿ: ನಜ್ಲ ಮುಬೀನ್
ಶಿಕ್ಷಕಿ ಜಾಸ್ಮೀನ್ ಗೋವಿಯಸ್ ವಾರ್ಷಿಕ ವರದಿ, ಶಿಕ್ಷಕಿ ದೀಪ್ತಿ ಲೆಕ್ಕಪತ್ರ ಮಂಡಿಸಿದರು. ಶಿಕ್ಷಕಿ ಲವೀನಾ ಕುಟಿನ್ಹಾ ಸ್ವಾಗತಿಸಿದರು. ಶಿಕ್ಷಕಿ ಮರಿಯ ಲುವೀಜಾ ವಂದಿಸಿದರು. ಶಿಕ್ಷಕಿ ಸರಿತಾ ಗೊನ್ಸಲ್ವಿಸ್ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರಗೀತೆಯೊಂದಿಗೆ ಸಭೆ ಮುಕ್ತಾಯವಾಯಿತು.










