






ನಿಡ್ಪಳ್ಳಿ; ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಪಾಣಾಜೆ ಗ್ರಾಮಕ್ಕೆ ಜು.4ರಂದು ಭೇಟಿ ನೀಡಿ ಮನೆ ಮನೆಗೆ ತೆರಳಿ ಎಸ್.ಐ.ಅರ್ ಬಗ್ಗೆ ಮಾಹಿತಿ ನೀಡಿದರು ಮತ್ತು ರಣಮಂಗಲ ದೇವಸ್ಥಾನದಲ್ಲಿ ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.


ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಉಜಿರೆಮಾರ್ , ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ವಿದ್ಯಾಧರ ಜೈನ್ ,ಪಾಣಾಜೆ ಶಕ್ತಿಕೇಂದ್ರದ ಅಧ್ಯಕ್ಷ ಗಣಪತಿ ಬಲ್ಯಾಯ ಮತ್ತು ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.













