ಪಟ್ಟೆ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ನೂತನ ಶಾಲಾ ಕಟ್ಟಡದ ಉದ್ಘಾಟನೆ

0

ಬಡಗನ್ನೂರು: ಮಗುವಿನ ಸರ್ವತೋಮುಖ ಬೆಳವಣಿಗೆ ಶಿಕ್ಷಣ ಮಹತ್ವವಾದಧ್ದು ಎಂದು ಶ್ರೀ ಕೃಷ್ಣ ವಿದ್ಯಾಸಂಸ್ಥೆಯ ಅಧ್ಯಕ್ಷ  ಗೋಪಾಲಕೃಷ್ಣ ಭಟ್  ಹೇಳಿದರು. ಅವರು ಪಟ್ಟೆ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ನೂತನ ಶಾಲಾ ಕಟ್ಟಡವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

“ಸುಮಾರು 75 ವರ್ಷಗಳ ಇತಿಹಾಸವಿರುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಯನ್ನು ದ್ವಾರಕಾ ಪ್ರತಿಷ್ಠಾನವು ವಹಿಸಿಕೊಂಡ ನಂತರ ಈ ಪ್ರದೇಶಕ್ಕೆ ಒಂದು ಉತ್ತಮವಾದ ಶಿಕ್ಷಣ ವ್ಯವಸ್ಥೆಯನ್ನು ನೀಡುವ ಕನಸಿನೊಂದಿಗೆ, ಮಗುವಿನ ಸರ್ವತೋಮುಖ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಬೇಕೆಂಬ ದೃಷ್ಟಿಯಿಂದ ಶಾಲೆಯ ಮೂಲಭೂತ ಸೌಕರ್ಯದೊಂದಿಗೆ ಈ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟನೆ ಮಾಡುತ್ತಿದ್ದೇವೆ” ಎಂದು ಹೇಳಿ ಶುಭ ಹಾರೖೆಸಿದರು.

ಜು.9ರಂದು ಬೆಳಗ್ಗೆ ಶ್ರೀ ಮಹಾಗಣಪತಿ ಹವನದೊಂದಿಗೆ ನೂತನ ಕಟ್ಟಡ ಉದ್ಘಾಟನೆ ನಡೆಯಿತು. ದ್ವಾರಕಾ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ನಿರ್ದೇಶಕರಾದ  ಗಣರಾಜ ಕುಂಬ್ಳೆ ರವರು ಪ್ರಾಸ್ತಾವಿಕ ಮಾತನಾಡಿ, ಶಾಲೆಯ ಮೂಲಭೂತ ಸೌಕರ್ಯಗಳಲ್ಲಿ ಕಟ್ಟಡವೂ ಒಂದು. ಕಟ್ಟಡವು ಸರಿಯಾಗಿ ಇದ್ದಾಗ ಪೋಷಕರಿಗೆ ತಮ್ಮ ಮಕ್ಕಳು ಒಳ್ಳೆಯ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂಬ ವಿಶ್ವಾಸ ಇರುತ್ತದೆ. ಮಕ್ಕಳು ಭಾರತೀಯ ಸಂಸ್ಕೃತಿಯೊಂದಿಗೆ ಒಳ್ಳೆಯ ವಿದ್ಯಾಭ್ಯಾಸ ಪಡೆಯುವಂತಾಗಲಿ” ಎಂದು ಶುಭ ಹಾರೈಸಿದರು. 

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ  ಅಶ್ವಿನಿ ಗೋಪಾಲ ಕೃಷ್ಣ ಭಟ್, ಸಂಸ್ಥೆಗಳ ಉಪಾಧ್ಯಕ್ಷ ಅಮೃತಕೃಷ್ಣ, ನಿರ್ದೇಶಕರಾದ ಪರಮೇಶ್ವರ ಭಟ್, ವೆಂಕಟಕೃಷ್ಣಶರ್ಮ, ಶಾಲಾ ಸಂಚಾಲಕ ವಿಘ್ನೇಶ್ ಹಿರಣ್ಯ, ಪ್ರತಿಭಾ ಪ್ರೌಢ ಶಾಲಾ ಎಸ್.ಡಿ.ಯಂ.ಸಿ ಅಧ್ಯಕ್ಷ ಲಿಂಗಪ್ಪ ಗೌಡ ಮೂಡಿಕೆ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಎಸ್.ಡಿ.ಯಂ.ಸಿ ಅಧ್ಯಕ್ಷ ಕೇಶವಪ್ರಸಾದ್ ನೀಲಗಿರಿ, ಶ್ರೀಕೃಷ್ಣ ಆಂಗ್ಲಮಾಧ್ಯಮ ಶಾಲಾ ಶಿಕ್ಷಕ ರಕ್ಷಕ ಸಂಘ ಅಧ್ಯಕ್ಷ  ಸತೀಶ್‌ ಕೊಪ್ಪಳ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರಾಜಗೋಪಾಲ ಎನ್. ಶ್ರೀಕೃಷ್ಣ ಅಂಗ್ಲಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ  ಪುಷ್ಪಾವತಿ ಡಿ  ಉಪಸ್ಥಿತರಿದ್ದರು. ಪ್ರತಿಭಾ ಪ್ರೌಢ ಶಾಲಾ ಮುಖ್ಯ ಶಿಕ್ಷಕಿ  ಸುಮನಾ ಬಿ.ರವರು ಸ್ವಾಗತಿಸಿ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ರಾಜ ಗೋಪಾಲ್ ಎನ್. ವಂದಿಸಿದರು ಆಂಗ್ಲ ಮಾಧ್ಯಮ ವಿಭಾಗದ ಶಿಕ್ಷಕಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು. 

ಕಾರ್ಯಕ್ರಮದಲ್ಲಿ ಊರಿನ ಗಣ್ಯರು, ಶಿಕ್ಷಣಾಭಿಮಾನಿಗಳು ಹಾಗೂ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಬೋಧಕ ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದರು.

LEAVE A REPLY

Please enter your comment!
Please enter your name here