







ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮದ ಪೆರಾಬೆಯ ಪ್ರಸಾದ್ ಶೆಟ್ಟಿ ಎಂಬವರ ಮನೆಯಲ್ಲಿ ಕೆಲಸಕ್ಕಿದ್ದ ಕೂಲಿಕಾರ್ಮಿಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಶಂಕರ್ ಲಮಾಣಿ ಆತ್ಮಹತ್ಯೆ ಮಾಡಿಕೊಂಡ ಕೂಲಿ ಕಾರ್ಮಿಕ. ಇವರು ಇವರ ಮನೆಯಲ್ಲಿ ಕಳೆದ 10 ವರ್ಷಗಳಿಂದ ಕೆಲಸಕ್ಕಿದ್ದರು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಇವರು ಜು.8ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 2.15ರ ಮಧ್ಯೆ ಪ್ರಸಾದ್ ಶೆಟ್ಟಿಯವರ ಗುಡ್ಡ ಜಮೀನಿನಲ್ಲಿರುವ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪ್ರಸಾದ್ ಶೆಟ್ಟಿಯವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.













