







ಉಪ್ಪಿನಂಗಡಿ; ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಸವಾರರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜು.9ರಂದು ಸಂಜೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಕೆಮ್ಮಾರದಲ್ಲಿ ನಡೆದಿದೆ.


ಉಪ್ಪಿನಂಗಡಿಯಿಂದ ಆತೂರು ಕಡೆಗೆ ಸಂಚರಿಸುತ್ತಿದ್ದ ಸ್ಕೂಟಿ ಹಾಗೂ ಕೊಯಿಲದಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಸ್ಕೂಟಿ ಸವಾರ, ಕೊಯಿಲ ಗ್ರಾಮದ ಏಣಿತ್ತಡ್ಕ ನಿವಾಸಿ ವಿಠಲ ನಾಯ್ಕ್ ಎಂಬವರು ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೈಕ್ ಸವಾರ ಮೂಲತ: ಕೊಯಿಲ ಗ್ರಾಮದ ಆನೆಗುಂಡಿ ನಿವಾಸಿ, ಪ್ರಸ್ತುತ ಹಿರೇಬಂಡಾಡಿಯಲ್ಲಿ ವಾಸ್ತವ್ಯವಿರುವ ನಾಗಪ್ಪ ಗೌಡ ಎಂಬವರು ಸಣ್ಣಪುಟ್ಟ ಗಾಯಗೊಂಡಿರುವುದಾಗಿ ವರದಿಯಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿವೆ.













