ಪುರುಷರಕಟ್ಟೆ ಪ್ರಕರಣ: 7 ವೆಬ್‌ನ್ಯೂಸ್‌ ಮಾಧ್ಯಮಗಳ ವಿರುದ್ಧ ಪ್ರಕರಣ ದಾಖಲು

0

ಪುತ್ತೂರು:ಪುರುಷರಕಟ್ಟೆಯಲ್ಲಿ ಜು.8ರಂದು ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಕೋಮು ಭಾವನೆಗಳನ್ನು ಪ್ರಚೋದಿಸುವ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುವ ಸಂದೇಶಗಳನ್ನು ಪ್ರಸಾರ ಮಾಡಿದ ಆರೋಪದಲ್ಲಿ 7 ವೆಬ್‌ನ್ಯೂಸ್‌ ಮಾಧ್ಯಮಗಳ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸತ್ಯ ಘಟನೆಯನ್ನು ಪ್ರಸಾರ ಮಾಡದೆ ಹಿಂದೂ-ಮುಸ್ಲಿಂ ಎಂದು ಬಿಂಬಿಸಿ ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ ರೀತಿಯಲ್ಲಿ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿ ಸಮಾಜಕ್ಕೆ ತಪ್ಪು ಸಂದೇಶವನ್ನು ನೀಡಿರುವುದಾಗಿ ಆರೋಪಿಸಿ ನೊಂದ ವ್ಯಕ್ತಿಗಳು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ ಹಾಗೂ ಕೋಮು ಪ್ರಚೋದನಾತ್ಮಕ ಸಂದೇಶಗಳನ್ನು ಪ್ರಸಾರ ಮಾಡುವವರ ವಿರುದ್ಧ ಕಾನೂನಿನಡಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲಾ ಪೊಲೀಸ್ ಅಧಿಕ್ಷಕ ಡಾ.ಅರುಣ್ ಕೆ.ಅವರು ತಿಳಿಸಿದ್ದಾರೆ.


ಯುವತಿ,ತಂದೆಯ ಹೆಸರು ಎಫ್‌ಐ ಆರ್‌ ನಲ್ಲಿ ಸೇರ್ಪಡೆ:
ಪುರುಷರಕಟ್ಟೆಯಲ್ಲಿ ಜು.8ರಂದು ನಡೆದ ಘಟನೆಗೆ ಸಂಬಂಧಿಸಿ ಯುವತಿ ಮತ್ತು ಆಕೆಯ ತಂದೆ ಸಾಂತಪ್ಪ ಗೌಡ ಅವರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮುರಳಿಕೃಷ್ಣ ಮತ್ತು ಇತರ ಮಾರ್ಗದರ್ಶನದಲ್ಲಿ ಯುವತಿ ಮತ್ತು ಆಕೆಯ ತಂದೆ ಸುಳ್ಳು ದೂರು ದಾಖಲಿಸಿದ್ದಾರೆ ಎಂಬುದಾಗಿ ದೂರು ದಾಖಲಾಗಿರುವುದರಿಂದ ಎಫ್ಐಆರ್‌ನಲ್ಲಿ ಯುವತಿ ಮತ್ತು ಆಕೆಯ ತಂದೆಯ ಹೆಸರನ್ನೂ ಸೇರಿಸಲಾಗಿದೆ ಎಂದು ಎಸ್ಪಿ ಡಾ.ಅರುಣ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here