






ರಾಮಕುಂಜ: ಶ್ರೀ ರಾಮಕುಂಜೇಶ್ವರ ವಿದ್ಯಾಲಯದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷಕ ಸಂಘದ ಪ್ರಥಮ ಪೋಷಕರ ಸಭೆಯು ಜು.9ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.


ಸಭೆಯ ಅಧ್ಯಕ್ಷತೆಯನ್ನು 2025-26ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ನೀರಜ್ ಕುಮಾರ್ ರೈ ವಹಿಸಿದ್ದರು. ಈ ಸಂದರ್ಭದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷಕ ಸಂಘವನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಗುರುರಾಜ್ ರೈ, ಉಪಾಧ್ಯಕ್ಷರಾಗಿ ರಾಜೇಶ್ ಎ.ಕೆ., ವಿಶ್ರುತ ಪಿ.ಸಿ., ಜೊತೆ ಕಾರ್ಯದರ್ಶಿಯಾಗಿ ಹೇಮಾಲತ ಪ್ರದೀಪ್, ನಾರಾಯಣ ಕೆ. ಆಯ್ಕೆಯಾದರು. ಅಲ್ಲದೆ ವಿವಿಧ ತರಗತಿಗಳ ಪೋಷಕ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಯಿತು. ಲೈಂಗಿಕ ಕಿರುಕುಳ ತಡೆ ಸಮಿತಿ, ಪೋಕ್ಸೋ ಸಮಿತಿ ಹಾಗೂ ಕುಂದುಕೊರತೆ ಪರಿಹಾರ ಸಮಿತಿಗಳನ್ನು ರಚಿಸಿ ಸದಸ್ಯರನ್ನು ನೇಮಕ ಮಾಡಲಾಯಿತು.



ಮುಖ್ಯ ಅತಿಥಿಯಾಗಿದ್ದ ಡಾ. ಸುದರ್ಶನ್ ಭಾರತೀಯ ಅವರು ಮಾತನಾಡಿ, ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರು ಮತ್ತು ಶಿಕ್ಷಕರ ಸಮನ್ವಯ ಅತ್ಯಂತ ಅಗತ್ಯವಾಗಿದೆ. ಉತ್ತಮ ಸಂಸ್ಕಾರ, ಶಿಸ್ತು ಹಾಗೂ ಮೌಲ್ಯಾಧಾರಿತ ಶಿಕ್ಷಣದ ಮೂಲಕ ವಿದ್ಯಾರ್ಥಿಗಳನ್ನು ಆದರ್ಶ ನಾಗರಿಕರನ್ನಾಗಿ ರೂಪಿಸುವಲ್ಲಿ ಪೋಷಕರ ಪಾತ್ರ ಮಹತ್ತರವಾಗಿದೆ ಎಂದು ಹೇಳಿದರು.
ಸಂಸ್ಥೆಯ ಕಾರ್ಯದರ್ಶಿ ಕೆ. ಸೇಸಪ್ಪ ರೈ ಅವರು ಶಾಲೆಯ ಶೈಕ್ಷಣಿಕ ಚಟುವಟಿಕೆಗಳು, ವಿದ್ಯಾರ್ಥಿಗಳ ಸಾಧನೆಗಳು ಹಾಗೂ ಮುಂಬರುವ ಶೈಕ್ಷಣಿಕ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಶ್ರೀ ರಾಮಕುಂಜೇಶ್ವರ ವಿದ್ಯಾಲಯದ ಸಂಚಾಲಕರಾದ ಶಿವಪ್ರಸಾದ್ ಇಜ್ಜಾವು, ಸದಸ್ಯರಾದ ಬಾಲಚಂದ್ರ ಮುಚ್ಚಿಂತಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲೆಯ ಪ್ರಾಂಶುಪಾಲರಾದ ಪ್ರವೀದ್. ಪಿ. ಸ್ವಾಗತಿಸಿ, ವಾರ್ಷಿಕ ವರದಿ ಮಂಡಿಸಿದರು. ಶಿಕ್ಷಕಿ ಹಿತಶ್ರೀ ಕಾರ್ಯಕ್ರಮ ನಿರೂಪಿಸಿದರು. ಪ್ರತೀಕ್ಷಾ ಆಳ್ವ ವಂದಿಸಿದರು. ಸಭೆಯಲ್ಲಿ ಪೋಷಕರು, ಶಿಕ್ಷಕರು ಹಾಗೂ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.










