ರೆಂಜಿಲಾಡಿ ಸ್ಯಾಂತೋಮ್ ವಿದ್ಯಾನಿಕೇತನ ಆಂಗ್ಲಮಾಧ್ಯಮ ಶಾಲಾ ಶಿಕ್ಷಕ-ರಕ್ಷಕ ಸಂಘ

0

ಅಧ್ಯಕ್ಷ: ಲಕ್ಷ್ಮಣ ಗೌಡ ಸಾಂತ್ಯಡ್ಕ, ಉಪಾಧ್ಯಕ್ಷೆ ; ಪುಫ್ರುಲ್ಲ ರೈ ಮರ್ದಾಳ

ನೆಲ್ಯಾಡಿ: ಕಡಬ ತಾಲೂಕಿನ ರೆಂಜಿಲಾಡಿ ಸ್ಯಾಂತೋಮ್ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯ 2026-27ನೇ ಶೈಕ್ಷಣಿಕ ವರ್ಷದ ಪ್ರಥಮ ಶಿಕ್ಷಕ ರಕ್ಷಕ ಸಂಘದ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು.


ಸಭೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಸತತ ನಾಲ್ಕನೇ ಬಾರಿಗೆ ಲಕ್ಷ್ಮಣ ಗೌಡ ಸಾಂತ್ಯಡ್ಕ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಪ್ರಫುಲ್ಲ ರೈ ಮರ್ದಾಳ ಆಯ್ಕೆಯಾದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಲಾ ಸಂಚಾಲಕರಾದ ರೆ.ಫಾ. ಪೌಲ್ ಜೇಕಬ್ ಅವರು ಮಾತನಾಡಿ, ಮಕ್ಕಳ ಭವಿಷ್ಯವನ್ನು ನಿರೂಪಿಸಲು ಶಿಸ್ತು, ಸಮಯ ಪಾಲನೆ, ಪ್ರಾಮಾಣಿಕತೆ ಪೋಷಕರ ಬದುಕಿಗೆ ಬಹಳ ಮುಖ್ಯ. ಪೋಷಕರು ಸಂಸ್ಥೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದರೆ, ವಿದ್ಯಾರ್ಥಿಗಳು ಬಹಳಷ್ಟು ಕ್ರಿಯಾಶೀಲರಾಗುತ್ತಾರೆ ಎಂದು ಹೇಳಿದರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಪುನರಾಯ್ಕೆಯಾದ ಲಕ್ಷ್ಮಣ ಗೌಡ ಸಾಂತ್ಯಡ್ಕ ಮಾತನಾಡಿ, ಪೋಷಕರು ಶಾಲೆಗೆ ಸಹಕಾರ ನೀಡಬೇಕು ಎಂದು ಹೇಳಿದರು. ಶಾಲಾ ಮುಖ್ಯಗುರು ಅರುಳ್‌ಸಾಮಿ ಅವರು ಶಾಲಾ ವಾರ್ಷಿಕ ಯೋಜನೆಗಳನ್ನು ವಿವರಿಸಿದರು. ಶಾಲಾ ಅಭಿವೃದ್ಧಿಗಾಗಿ ವಿವಿಧ ಸಮಿತಿಗಳನ್ನು ರಚಿಸಲಾಯಿತು. ಸಭೆಯಲ್ಲಿ ವಿದ್ಯಾರ್ಥಿಗಳ ಪೋಷಕರು, ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ಕ್ರಿಸ್ಟೀನಾ ಪಿ.ಕೆ. ಸ್ವಾಗತಿಸಿದರು. ಸಂಧ್ಯಾ ಶಿಕ್ಷಕ-ರಕ್ಷಕ ಸಂಘದ ವರದಿ ವಾಚಿಸಿದರು. ವಿಶ್ವತ್ ಪಿ.ವಂಂದಿಸಿದರು. ಶಾಲಾ ಸಹ ಶಿಕ್ಷಕಿ ಶ್ವೇತಾ ನಿರೂಪಿಸಿದರು.

LEAVE A REPLY

Please enter your comment!
Please enter your name here