







ನಿಡ್ಪಳ್ಳಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಪುತ್ತೂರು, ಬೆಟ್ಟಂಪಾಡಿ ವಲಯದ ಆಶ್ರಯದಲ್ಲಿ ಪಾಣಾಜೆ ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಳೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.


ಬೆಟ್ಟಂಪಾಡಿ ವಲಯ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಪಾಣಾಜೆ ಮತ್ತು ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟ ಪಾಣಾಜೆ ಇವುಗಳ ಸಹಕಾರದಲ್ಲಿ ಪರಮಪೂಜ್ಯ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದದೊಂದಿಗೆ ಜು.12ರಂದು ಬೆಳಿಗ್ಗೆ 8:00 ಗಂಟೆಯಿಂದ ಪೂಜೆ ನಡೆಯಲಿದೆ. ವೇದಮೂರ್ತಿ ಶ್ರೀಕೃಷ್ಣ ಭಟ್ ಬಟ್ಯಮೂಲೆ ಇವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನಡೆಯಲಿವೆ.



ಸಭಾ ಕಾರ್ಯಕ್ರಮ:
ಬೆಳಿಗ್ಗೆ 10:30ಕ್ಕೆ ಧಾರ್ಮಿಕ ಸಭೆ ಮತ್ತು ಒಕ್ಕೂಟದ ಪದಗ್ರಹಣ ನಡೆಯಲಿದೆ. ಪಾಣಾಜೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಹಾಗೂ ಪೂಜಾ ಸಮಿತಿ ಅಧ್ಯಕ್ಷ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರು ಅಧ್ಯಕ್ಷತೆ ವಹಿಸಲಿದ್ದಾರೆ. ಉಚ್ಚ ನ್ಯಾಯಾಲಯ ಬೆಂಗಳೂರಿನ ನ್ಯಾಯವಾದಿ ರಾಜಾರಾಮ್ ಭಟ್ ಸೂರ್ಯಂಬೈಲು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸೇವಾ ಪ್ರತಿನಿಧಿ ಜಯಶ್ರೀ ದೇವಸ್ಯ ಮತ್ತು ಒಕ್ಕೂಟದ ಪದಾಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ.










