






ಪುತ್ತೂರು: ಸಾಂದೀಪನಿ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ರಜತ ಪಲ್ಲವ’ ವ್ಯಕ್ತಿತ್ವ ವಿಕಸನ ಸರಣಿ ಕಾರ್ಯಾಗಾರದ ಮೂರನೇ ತರಬೇತಿ ಕಾರ್ಯಕ್ರಮ ನಡೆಯಿತು.



ಒಂಬತ್ತನೇ ತರಗತಿ ವಿದ್ಯಾರ್ಥಿಗಳಿಗಾಗಿ ನಡೆದ ಈ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳ ಬೌದ್ಧಿಕ ಮತ್ತು ಕೌಶಲ್ಯಗಳ ಅಭಿವೃದ್ಧಿಯ ಜತೆಗೆ ವ್ಯಕ್ತಿತ್ವ ವಿಕಸನಕ್ಕೆ ಒತ್ತು ನೀಡಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಫಿಸಿಯೋಥೆರಪಿ ತಜ್ಞೆ ಸುಷ್ಮಾ ಬಿ. ಹಿರೇಮಠ್ ಭಾಗವಹಿಸಿದ್ದರು. ಅವರು ವಿದ್ಯಾರ್ಥಿಗಳಿಗೆ ಸಂವಹನ ಕೌಶಲ್ಯದ ಮಹತ್ವ, ಅದರ ವಿಧಾನಗಳು ಮತ್ತು ಅಗತ್ಯತೆಯ ಬಗ್ಗೆ ತರಬೇತಿ ನೀಡಿದರು. ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಅವರ ಸಂಶಯಗಳಿಗೆ ಉತ್ತರಿಸುವ ಮೂಲಕ ಉಪಯುಕ್ತ ಮಾಹಿತಿ ನೀಡಿದರು.



ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಕಾರ್ಯದರ್ಶಿ ಕೃಷ್ಣಪ್ರಸಾದ್ ಕೆದಿಲಾಯ, ಶಾಲಾ ಕೋಶಾಧಿಕಾರಿ ಹರೀಶ್ ಪುತ್ತೂರಾಯ, ಜೆ.ಸಿ ಟ್ರೈನರ್ ವೇಣುಗೋಪಾಲ್ ಮತ್ತು ಮುಖ್ಯ ಶಿಕ್ಷಕ ಪ್ರಸನ್ನ ಕೆ ಉಪಸ್ಥಿತರಿದ್ದರು. ತರಬೇತಿ ಕಾರ್ಯಕ್ರಮದ ಸಂಯೋಜಕರಾದ ಸಹ ಶಿಕ್ಷಕ ಆನಂದ್ ಆರ್. ಸ್ವಾಗತಿಸಿದರು. ಸಹ ಶಿಕ್ಷಕಿ ವಾಣಿ ವಂದಿಸಿದರು.










