







ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಕಾರ್ಯಕ್ರಮ ನಡೆಯಿತು.


ಗಂಡಿಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ತುಳಸಿ ಅವರು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪೆರಾಬೆ ಶಾಲೆ ಮುಖ್ಯಶಿಕ್ಷಕಿ ಹೇಮಲತಾ ಅವರು ವಿದ್ಯಾರ್ಥಿ ಪರಿಷತ್ತಿನ ಸದಸ್ಯರಿಗೆ ಬ್ಯಾಡ್ಜ್ಗಳನ್ನು ವಿತರಿಸಿ ಶುಭ ಹಾರೈಸಿದರು.



ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯಶಿಕ್ಷಕ ಸತೀಶ್ ಭಟ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಮಾಜ ವಿಜ್ಞಾನ ಶಿಕ್ಷಕರಾದ ದಿನೇಶ್ ಅವರು ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರಮಾಣವಚನ ಬೋಧಿಸಿದರು. ನಿಶ್ಚಿತ ಕಾರ್ಯಕ್ರಮ ನಿರೂಪಿಸಿದರು. ಆಂಗ್ಲ ಭಾಷಾ ಶಿಕ್ಷಕ ಪ್ರವೀಣ್ ಕುಮಾರ್ ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.










