






ನಿಡ್ಪಳ್ಳಿ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಪುತ್ತೂರು ಬೆಟ್ಟಂಪಾಡಿ ವಲಯದ ಪಾಣಾಜೆ ಕಾರ್ಯಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ ಹಾಗೂ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ಜು.12 ರಂದು ರಣಮಂಗಲ ದೇವಸ್ಥಾನದಲ್ಲಿ ನಡೆಯಿತು.


ಹೈಕೋರ್ಟು ನ್ಯಾಯವಾದಿ ರಾಜಾರಾಮ್ ಭಟ್ ಸೂರ್ಯಂಬೈಲು ಧಾರ್ಮಿಕ ಉಪನ್ಯಾಸ ನೀಡಿ ಸನಾತನ ಹಿಂದೂ ಧರ್ಮದ ಬಗ್ಗೆ ತಿಳಿಸಿ ಯಾವುದೇ ಪರಿಸ್ಥಿತಿಯಲ್ಲಿ ನಮ್ಮ ನಮ್ಮ ಧರ್ಮ ಮತ್ತು ಸಂಸ್ಕೃತಿಯನ್ನು ಬಿಟ್ಟು ಹೋಗಬಾರದು. ನಮ್ಮ ಮಕ್ಕಳಿಗೆ ಧಾರ್ಮಿಕ ಸಂಸ್ಕೃತಿಯ ಬಗ್ಗೆ ಮೊದಲು ಮನೆಯಲ್ಲಿ ಕಲಿಸಬೇಕು. ದೈವಾರಾಧನೆಯನ್ನು ಉಳಿಸಬೇಕು ಮತ್ತು ಮುಂದಿನ ಮಕ್ಕಳಿಗೂ ಕಲಿಸಬೇಕು ಎಂದರು.




ಮುಖ್ಯ ಅತಿಥಿಯಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ದ.ಕ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಮಾತನಾಡಿ ಸತ್ಯನಾರಾಯಣ ಪೂಜೆ ಖಾವಂದರ ಚಿಂತನೆಯ ಫಲ. ಯೋಜನೆಯ ವಿಸ್ತರಣೆ ಬಗ್ಗೆ ಮತ್ತು ಕಡಿಮೆ ಬಡ್ಡಿ ದರದಲ್ಲಿ ಜನಸಾಮಾನ್ಯರಿಗೆ ಸಾಲ ಒದಗಿಸುವ ಒಂದು ಏಕೈಕ ಸಂಸ್ಥೆ ಆಗಿದೆ ಯೋಜನೆಯ ಕಾರ್ಯಕ್ರಮಗಳ ಬಗ್ಗೆ, ಸಾಲ ಸೌಲಭ್ಯಗಳ ಬಡ್ಡಿ ಲೆಕ್ಕಾಚಾರ ಬಗ್ಗೆ ವಿಸ್ತಾರವಾಗಿ ತಿಳಿಸಿ ಇನ್ನೂ ಮುಂದೆಯೂ ಹೆಚ್ಚಿನ ಅಭಿವೃದ್ಧಿ ಹೊಂದಲಿ ಎಂದು ಹೇಳಿ ಶುಭ ಹಾರೈಸಿದರು. ಯೋಜನಾಧಿಕಾರಿ ಶಶಿಧರ.ಯಂ ಮಾತನಾಡಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮತ್ತು ಕ್ಷೇತ್ರದಿಂದ ನೀಡುವ ಅನುದಾನಗಳ ಬಗ್ಗೆ ಮಾಹಿತಿ ನೀಡಿದರು.ಪೂಜಾ ಸಮಿತಿ ಅಧ್ಯಕ್ಷ ನಾರಾಯಣ್ ಪ್ರಕಾಶ್ ನೆಲ್ಲಿತ್ತಿಮಾರು ಅಧ್ಯಕ್ಷತೆ ವಹಿಸಿದ್ದರು. ರಣಮಂಗಲ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೆಸರರಾದ ಶ್ರೀಕೃಷ್ಣ ಬೋಳಿಲ್ಲಾಯ,ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯ ಸದಾಶಿವ ರೈ ಸೂರಂಬೈಲು, ಬೆಟ್ಟಂಪಾಡಿ ವಲಯಾಧ್ಯಕ್ಷ ಬಾಲಕೃಷ್ಣ ನಾಯ್ಕ ಹಾಗೂ ಎರಡು ಒಕ್ಕೂಟದ ನಿಕಟ ಪೂರ್ವ ಮತ್ತು ನೂತನ ಅಧ್ಯಕ್ಷರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು .
ನಿಕಟ ಪೂರ್ವ ಒಕ್ಕೂಟದ ಪದಾಧಿಕಾರಿಗಳು ನೂತನ ಒಕ್ಕೂಟದ ಪದಾಧಿಕಾರಿಗಳಿಗೆ ವೀಳ್ಯ ನೀಡಿ ದಾಖಲಾತಿ ಹಸ್ತಾಂತರಿಸುವ ಮೂಲಕ ಪದಗ್ರಹಣ ನಡೆಯಿತು.ವಲಯದ ಸೇವಾ ಪ್ರತಿನಿಧಿಗಳು, ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು. ಜನಾರ್ದನ ಸ್ವಾಗತಿಸಿ, ಸೇವಾ ಪ್ರತಿನಿಧಿ ಜಯಶ್ರೀ. ಡಿ ವರದಿ ವಾಚಿಸಿ, ಅನಿತಾ ವಂದಿಸಿದರು. ವಲಯ ಮೆಲ್ವೀಚಾರಕ ಆದರ್ಶ್ ಕಾರ್ಯಕ್ರಮ ನಿರೂಪಿಸಿದರು.ಸಭಾ ಕಾರ್ಯಕ್ರಮದ ನಂತರ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.










