






ಪುತ್ತೂರು: ಸಾಮಾಜಿಕ ಜಾಲತಾಣಗಳಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರನ್ನು ಅವಹೇಳನಕಾರಿಯಾಗಿ ಚಿತ್ರಿಸಿ, ರಾಜ್ಯ ಸರಕಾರ ಮತ್ತು ಗೃಹ ಸಚಿವರ ಬಗ್ಗೆ ತಪ್ಪು ಗ್ರಹಿಕೆ ಮೂಡಿಸುವ ರೀತಿಯಲ್ಲಿ ಪ್ರಚಾರ ಮಾಡಿದ ಆರೋಪದ ಮೇಲೆ ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ಬ್ಲಾಕ್ ಕಾಂಗ್ರೆಸ್ ಹಾಗೂ ಬ್ಲಾಕ್ ಸಾಮಾಜಿಕ ಜಾಲತಾಣ ಘಟಕದ ವತಿಯಿಂದ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.


ಪುತ್ತೂರು ಬ್ಲಾಕ್ ಅಧ್ಯಕ್ಷರ ನೇತೃತ್ವದಲ್ಲಿ ಸಾಮಾಜಿಕ ಜಾಲತಾಣ ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಸುಪ್ರೀತ್ ಕಣ್ಣಾರಾಯ ಅವರು ದೂರು ನೀಡಿದ್ದಾರೆ. ದೂರಿನಲ್ಲಿ ಬಂಟ್ವಾಳದಲ್ಲಿ ನಡೆದ ಹೇಯ ಕೃತ್ಯಕ್ಕೆ ಪುತ್ತೂರು ಶಾಸಕರ ಕುಮ್ಮಕ್ಕು ಇದೆ ಎಂಬ ಅರ್ಥ ಬರುವಂತೆ ಬರಹಗಳು ಮತ್ತು ಭಾವಚಿತ್ರಗಳನ್ನು ದುರುಪಯೋಗಪಡಿಸಿಕೊಂಡು ಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಇದು ಜನರಲ್ಲಿ ಶಾಸಕರು, ರಾಜ್ಯ ಸರಕಾರ ಮತ್ತು ಗೃಹ ಮಂತ್ರಿಗಳ ಬಗ್ಗೆ ತಪ್ಪು ಕಲ್ಪನೆ ಮೂಡಿಸುತ್ತಿದೆ ಎಂದು ತಿಳಿಸಲಾಗಿದೆ. ಆರೋಪಿಯ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.



ಪುಡಾ ಅಧ್ಯಕ್ಷ ಅಮಳ ರಾಮಚಂದ್ರ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ, ಶರೋನ್ ಸಿಕ್ವೇರಾ, ಸೌರಭ್ ರೈ, ಪುತ್ತೂರು ಬ್ಲಾಕ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ಪೃಥ್ವಿರಾಜ್, ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ, ಪ್ರಚಾರ ಸಮಿತಿ ಅಧ್ಯಕ್ಷ ಅಮರನಾಥ ಗೌಡ, ಬ್ಲಾಕ್ ಕಾರ್ಯದರ್ಶಿ ಗಂಗಾಧರ್ ಶೆಟ್ಟಿ ಎಲಿಕ್ಕ, ವಲಯಾಧ್ಯಕ್ಷರಾದ ಧೀರಜ್ ಗೌಡ ಕೊಡಿಪ್ಪಾಡಿ, ಗಿರೀಶ್ ರೈ ಆರ್ಯಪು, ಅಶೋಕ್ ಪಾಯಸ್, ಪ್ರಶಾಂತ್ ಮುರಾ ಉಪಸ್ಥಿತರಿದ್ದರು.










