ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಬಲಾತ್ಕಾರದಿಂದ ದೈಹಿಕ ಸಂಪರ್ಕ-ಆರೋಪಿ ದೋಷಮುಕ್ತ

0

ಪುತ್ತೂರು:ಮದುವೆಯಾಗುವುದಾಗಿ ನಂಬಿಸಿ ಪ.ಪಂಗಡದ ಯುವತಿಯೋರ್ವರೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿ ಗರ್ಭಿಣಿಯಾದ ಬಳಿಕ ಮದುವೆಯಾಗಲು ನಿರಾಕರಿಸಿದ್ದಲ್ಲದೆ, ಬೆದರಿಕೆಯೊಡ್ಡಿದ್ದ ಪ್ರಕರಣದ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.


ಸುಳ್ಯ ಗುತ್ತಿಗಾರಿನ ವಳಲಂಬೆ ನಿವಾಸಿ ಸದಾಶಿವ ಶೆಟ್ಟಿ ಎಂಬವರ ವಿರುದ್ಧ ಗುತ್ತಿಗಾರು ಚನಿಲದ ಯುವತಿಯೋರ್ವರು ನೀಡಿದ್ದ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಘಟನೆ 2019ರಲ್ಲಿ ನಡೆದಿತ್ತು.ಇಲ್ಲಿನ ಕುರಿಯದಲ್ಲಿ ವೈದ್ಯರೋರ್ವರಿಗೆ ಸೇರಿದ ತೋಟದ ಮನೆಯಲ್ಲಿರುತ್ತಿದ್ದ ಸಂದರ್ಭ ಅಲ್ಲಿಗೆ ಬರುತ್ತಿದ್ದ ಆರೋಪಿಯು, ಮದುವೆಯಾಗುವುದಾಗಿ ನಂಬಿಸಿ ತನ್ನೊಂದಿಗೆ ಬಲಾತ್ಕಾರವಾಗಿ ದೈಹಿಕ ಸಂಪರ್ಕ ಬೆಳೆಸಿದ್ದು ಇದರಿಂದ ತಾನು ಗರ್ಭಿಣಿಯಾಗಿದ್ದು ಆ ಬಳಿಕ ಮದುವೆಯಾಗಲು ನಿರಾಕರಿಸಿ ಬೆದರಿಸಿದ್ದಾಗಿ ಆರೋಪಿಸಿ ಯುವತಿ ದೂರು ನೀಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆರೋಪಿಯನ್ನು ಖುಲಾಸೆಗೊಳಿಸಿದೆ. ಆರೋಪಿ ಪರ ವಕೀಲರಾದ ಮಾಧವ ಪೂಜಾರಿ, ರಾಕೇಶ್ ಬಲ್ನಾಡ್ ಮತ್ತು ನಿಶಾ ಕುಮಾರಿ ವಾದಿಸಿದ್ದರು.

LEAVE A REPLY

Please enter your comment!
Please enter your name here