






ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯ ಯು.ಡಿ.ಐಡಿ ಕಾರ್ಡ್ ವಿಭಾಗದಲ್ಲಿ ವಿಕಲ ಚೇತನರ ಇಲಾಖೆಯ ವಿಶಿಷ್ಟ ಗುರುತಿನ ಚೀಟಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ವಿಖ್ಯಾತ್ ಅವರನ್ನು ಜು.20ರಂದು ಅಭಿನಂದಿಸಲಾಯಿತು.


ಪುತ್ತೂರು ತಾಲ್ಲೂಕು ಪಂಚಾಯತ್ ವಿಕಲ ಚೇತನರ ಸೇವಾ ಕೇಂದ್ರ ಕಚೇರಿ ಹಾಗೂ ಪುತ್ತೂರು ಮತ್ತು ಕಡಬ ತಾಲ್ಲೂಕು ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ವತಿಯಿಂದ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಗೌರವಿಸಲಾಯಿತು.



ಈ ಸಂದರ್ಭದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞೆ ಡಾ. ಪುಷ್ಪಲತಾ ಎನ್, ಪುತ್ತೂರು ತಾಲ್ಲೂಕು ಪಂಚಾಯತ್ ವಿಕಲ ಚೇತನರ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ನವೀನ್ ಕುಮಾರ್, ಪುತ್ತೂರು ತಾಲ್ಲೂಕು 34 ನೆಕ್ಕಿಲಾಡಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಸೇಸಪ್ಪ, ಕುಡ್ದಿಪ್ಪಾಡಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ರವೀಂದ್ರ ಆಚಾರ್ಯ, ಎಡಮಂಗಲ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ಅಕ್ಷತಾ ಎ, ಪುತ್ತೂರು ನಗರಸಭೆಯ ನಗರ ಪುನರ್ವಸತಿ ಕಾರ್ಯಕರ್ತ ಭರತ್ ಕೆ, ಉಮಾವತಿ ಹಾಗೂ ಪುತ್ತೂರು ಸರಕಾರಿ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.










