ನೆಲ್ಯಾಡಿ: ಕಾಮಧೇನು ಶ್ರೀ ವರಮಹಾಲಕ್ಷ್ಮೀ ಸೇವಾ ಸಮಿತಿ ಸಭೆ

0

ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರಿ ಸಂಘ ನೆಲ್ಯಾಡಿ ಇದರ ಸಹಯೋಗದೊಂದಿಗೆ ಕಾಮಧೇನು ಶ್ರೀ ವರಮಹಾಲಕ್ಷ್ಮಿ ಸೇವಾ ಸಮಿತಿ ವತಿಯಿಂದ ನಡೆಯುವ ಶ್ರೀ ವರಮಹಾಲಕ್ಷ್ಮೀ ಪೂಜೆಯ ಪೂರ್ವಭಾವಿ ಸಭೆಯು ಜು.20 ರಂದು ಮಧ್ಯಾಹ್ನ ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಶಬರೀಶ ಕಲಾ ಮಂದಿರದಲ್ಲಿ ನಡೆಯಿತು.


ಕಾಮಧೇನು ಶ್ರೀ ವರಮಹಾಲಕ್ಷ್ಮಿ ಸೇವಾ ಸಮಿತಿ ಅಧ್ಯಕ್ಷೆ ಉಷಾ ಅಂಚನ್ ಅಧ್ಯಕ್ಷತೆ ವಹಿಸಿದ್ದರು. ಆ.28ರಂದು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಶಬರೀಶ ಕಲಾ ಮಂದಿರದಲ್ಲಿ ನಡೆಯುವ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ತಯಾರಿ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಮಿತಿಯ ಪದಾಧಿಕಾರಿಗಳು, ಸದಸ್ಯರು ಸಲಹೆ ಸೂಚನೆ ನೀಡಿದರು. ಸಮಿತಿಯ ಸಂಚಾಲಕಿ ಚೈತನ್ಯ ಸ್ವಾಗತಿಸಿ, ಕಾರ್ಯದರ್ಶಿ ದಿವ್ಯಾ ಪಿ.ವಂದಿಸಿದರು.

LEAVE A REPLY

Please enter your comment!
Please enter your name here