






ನಿಡ್ಪಳ್ಳಿ: ಬೆಟ್ಟಂಪಾಡಿ ಗ್ರಾಮ ಪಂಚಾಯತಿನ 2026-27 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜು.23 ರಂದು ಬೆಳಿಗ್ಗೆ ಗಂಟೆ 10.30 ಕ್ಕೆ ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಆಡಳಿತ ಅಧಿಕಾರಿ ಡಾ.ಧರ್ಮಪಾಲ ಕೆ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.


ತಾಲೂಕು ಪಂಚಾಯತ್ ಸಹಾಯಕ ಪ್ರಭಾರ ನಿರ್ದೇಶಕರು ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಲಿದ್ದು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪಿಡಿಒ ಸೌಮ್ಯ ಎಂ.ಎಸ್ ತಿಳಿಸಿದ್ದಾರೆ.












