







ಆಲಂಕಾರು: ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜು.24 ಶುಕ್ರವಾರ ಸಂಜೆ 5:00 ರಿಂದ ಸಾಮೂಹಿಕ ದುರ್ಗಾ ನಮಸ್ಕಾರ ಪೂಜೆ, ಕುಂಕುಮಾರ್ಚನೆ ಮತ್ತು ಮಹಾಪೂಜೆ ನಡೆಯಲಿದೆ.


ಕ್ಷೇತ್ರದ ತಂತ್ರಿಗಳಾದ ಕುಡುಪು ಶ್ರೀ ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ಪೂಜೆ ನಡೆಯಲಿದ್ದು, ಶ್ರೀ ಸುಬ್ರಹ್ಮಣ್ಯ ಕಾರಂತರ ಸಂಕೀರ್ತನೆಯೊಂದಿಗೆ ಕುಂಕುಮಾರ್ಚನೆ ನೆರವೇರಲಿದೆ. ನಂತರ ಸ್ಮರಣ ಸಂಚಿಕೆ ವಿತರಣಾ ಕಾರ್ಯಕ್ರಮ ನಡೆಯಲಿದೆ.




ಕಾರ್ಯಕ್ರಮದ ಸಭಾ ಅಧ್ಯಕ್ಷತೆಯನ್ನು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಕೆ.ಸುಬ್ರಹ್ಮಣ್ಯ ರಾವ್ ವಹಿಸಲಿದ್ದಾರೆ. ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎ.ಕೃಷ್ಣಪ್ಪ ಪೂಜಾರಿ, ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕ ಗಣರಾಜ್ ಕುಂಬ್ಳೆ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಡಾ.ಹೇಮಂತ್ ರೈ ಮನವಳಿಕೆಗುತ್ತು, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಎಂ.ಗೋಪಾಲಕೃಷ್ಣ ಪಡ್ಡಿಲ್ಲಾಯ ಅವರ ಉಪಸ್ಥಿತಿಯಲ್ಲಿ ಸ್ಮರಣ ಸಂಚಿಕೆ ವಿತರಣೆ ನಡೆಯಲಿದೆ. ಬಳಿಕ ಅನ್ನಸಂತರ್ಪಣೆ ಇರಲಿದೆ.
ಈ ಕಾರ್ಯಕ್ರಮದಲ್ಲಿ ಭಕ್ತರು ಪಾಲ್ಗೊಂಡು ಶ್ರೀ ದೇವಿಯ ಕೃಪೆಗೆ ಪಾತ್ರರಾಗುವಂತೆ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಕೆ.ಸುಬ್ರಹ್ಮಣ್ಯ ರಾವ್ ಮತ್ತು ಸದಸ್ಯರು, ಪವಿತ್ರಪಾಣಿ ಎನ್.ಹರೀಶ ಆಚಾರ್ಯ ನಗ್ರಿಗುತ್ತು, ಅರ್ಚಕರು, ಸಿಬ್ಬಂದಿ ವರ್ಗ, ಸೀಮೆಯ ಹತ್ತು ಸಮಸ್ತರು, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಡಾ. ಹೇಮಂತ್ ರೈ ಮನವಳಿಕೆಗುತ್ತು ಮತ್ತು ಸರ್ವ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










