ಜು.26: ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನಲ್ಲಿ ಧನ್ಯೋಸ್ಮಿ, ಗ್ರಂಥಾಲಯ ಉದ್ಘಾಟನೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಮುಖ್ಯಶಿಕ್ಷಕರಾಗಿದ್ದು ಜು.31ರಂದು ನಿವೃತ್ತಿಯಾಗುತ್ತಿರುವ ಸತೀಶ್ ಭಟ್ ಬಿಳಿನೆಲೆ ಅವರಿಂದ ವೃತ್ತಿ ಜೀವನದಲ್ಲಿ ಸಹಕರಿಸಿದವರಿಗೊಂದು ಕೃತಜ್ಞತಾ ನಮನ ‘ಧನ್ಯೋಸ್ಮಿ ‘ ಹಾಗೂ ಶಾಲೆಗೆ ಕೊಡುಗೆಯಾಗಿ ನೀಡುವ ಗ್ರಂಥಾಲಯದ ಉದ್ಘಾಟನೆ ಜು.26ರಂದು ಬೆಳಗ್ಗೆ 10 ಗಂಟೆಗೆ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.


ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ಕೆ.ಎಸ್.ರಾಧಾಕೃಷ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ (ಆಡಳಿತ) ದ.ಕ. ಇಲ್ಲಿನ ಉಪನಿರ್ದೇಶಕರಾದ ಶಶಿಧರ ಜಿ.ಎಸ್. ಗ್ರಂಥಾಲಯ ಉದ್ಘಾಟಿಸಲಿದ್ದಾರೆ. ಜೇಸೀ ರಾಷ್ಟ್ರೀಯ ತರಬೇತುದಾರ ಕೆ.ರಾಜೇಂದ್ರ ಭಟ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ವಿಶ್ರಾಂತ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಅವರು ‘ಗುರುತ್ವಾಕರ್ಷಣ’ ಅಭಿನಂದನಾ ಹೊತ್ತಗೆ ಬಿಡುಗಡೆ ಮಾಡಲಿದ್ದಾರೆ. ಪುತ್ತೂರು ಎಸ್‌ಆರ್‌ಕೆ ಲ್ಯಾಡರ್ಸ್‌ನ ಕೇಶವ ಅಮೈ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಕೆ.ಸೇಸಪ್ಪ ರೈ, ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಸಂಚಾಲಕ ನಾರಾಯಣ ಭಟ್, ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ ಕೆ., ಬೆಂಗಳೂರು ಸಿಸ್ಕೋ ಕಂಪನಿ ಮ್ಯಾನೇಜರ್ ಭಾಸ್ಕರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ಸಹಮಿಲನ-ಸಹಭೋಜನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.



ನಿವೃತ್ತ ಯೋಧ ಜಯಕುಮಾರ್‌ಗೆ ಸನ್ಮಾನ
ಜು.26 ಕಾರ್ಗಿಲ್ ವಿಜಯ್ ದಿವಸ್ ಆಗಿದ್ದು ಈ ಹಿನ್ನೆಲೆಯಲ್ಲಿ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ನಿವೃತ್ತ ಸೈನಿಕ, ಪ್ರಸ್ತುತ ವಲಯಾರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಜಯಕುಮಾರ್ ಸಣ್ಣಾರ ಅವರಿಗೆ ‘ ಧನ್ಯೋಸ್ಮಿ’ ಕಾರ್ಯಕ್ರಮದಲ್ಲಿ ಸನ್ಮಾನ ನಡೆಯಲಿದೆ. ಸತೀಶ್ ಭಟ್ ಬಿಳಿನೆಲೆ ಅವರ ಮೊದಲ ಬ್ಯಾಚ್‌ನ ವಿದ್ಯಾರ್ಥಿಯಾಗಿರುವ ಜಯಕುಮಾರ್ ಅವರು ಪ್ರಸ್ತುತ ಬಿಳಿನೆಲೆ ಗೋಪಾಲಕೃಷ್ಣ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿದ್ದಾರೆ.

LEAVE A REPLY

Please enter your comment!
Please enter your name here