







ಪುತ್ತೂರು:ಜು.22ರಂದು ಸುರಿದ ಭಾರೀ ಗಾಳಿ ಮಳೆಗೆ ನರಿಮೊಗರು ಗ್ರಾಮದ ಮುಕ್ವೆಯಲ್ಲಿ ಚೋಮ ಅವರ ಮನೆಯ ಗೋಡೆ ಮತ್ತು ಮೇಲ್ಚಾವಣಿಗೆ ಹಾನಿಯಾಗಿದೆ.


ಮಣ್ಣಿನ ಗೋಡೆಯ ಮನೆಯ ಒಂದು ಭಾಗ ಸಂಪೂರ್ಣ ಕುಸಿದಿದೆ.ಘಟನೆ ಸಂದರ್ಭ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.ಸ್ಥಳಕ್ಕೆ ಅಧಿಕಾರಿಗಳು ತೆರಳಿ ಮಾಹಿತಿ ಪಡೆದುಕೊಂಡಿದ್ದಾರೆ.













