






ಪುತ್ತೂರು:ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯನ್ನೊಳಗೊಂಡ ದ.ಕ ಗ್ಯಾರೇಜ್ ಮಾಲಕರ ಸಂಘ, ಮಂಗಳೂರು ಇದರ ಪುತ್ತೂರು ವಲಯದ ವಾರ್ಷಿಕ ಮಹಾಸಭೆಯು ಜು.26 ರಂದು ಬೆಳಿಗ್ಗೆ ಮಿನಿ ವಿಧಾನಸೌಧದ ಬಳಿಯ ರೋಟರಿ ಮನೀಷಾ ಸಭಾಂಗಣದಲ್ಲಿ ಜರಗಲಿದೆ.


ದ.ಕ ಗ್ಯಾರೇಜ್ ಮಾಲಕರ ಸಂಘ ಮಂಗಳೂರು, ದ.ಕ ಮತ್ತು ಉಡುಪಿ ಜಿಲ್ಲೆಯ ಚೇರ್ಮನ್ ಜನಾರ್ದನ ಎ.ರವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪುತ್ತೂರು ವಲಯ ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ಶರತ್ ಕುಮಾರ್ ರೈರವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಶಾಸಕ ಅಶೋಕ್ ಕುಮಾರ್ ರೈ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಗೌರವ ಉಪಸ್ಥಿತಿಯಾಗಿ ದ.ಕ ಗ್ಯಾರೇಜ್ ಮಾಲಕರ ಸಂಘ ಮಂಗಳೂರು, ದ.ಕ ಮತ್ತು ಉಡುಪಿ ಜಿಲ್ಲೆಯ ಮಾಜಿ ಚೇರ್ಮನ್ ಪುಂಡಲೀಕ ಸುವರ್ಣ, ಅಧ್ಯಕ್ಷ ದಿನಕರ ಕುಲಾಲ್, ಕಾರ್ಯದರ್ಶಿ ಕೆ.ಎ ರಾಜಗೋಪಾಲ, ಕೋಶಾಧಿಕಾರಿ ಕಿರಣ್ ರಾಜ್ ಭಾಗವಹಿಸಲಿದ್ದಾರೆ ಎಂದು ಪುತ್ತೂರು ವಲಯ ಗ್ಯಾರೇಜ್ ಮಾಲಕರ ಸಂಘದ ಗೌರವಾಧ್ಯಕ್ಷ ಕಿಶೋರ್ ಕುಮಾರ್ ಜಿ, ಅಧ್ಯಕ್ಷ ಶರತ್ ಕುಮಾರ್ ರೈ, ಕಾರ್ಯದರ್ಶಿ ದಿನೇಶ್ ಕಬಕರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













