ಜು.27: ಒಳಮೊಗ್ರು ಗ್ರಾಮ ಪಂಚಾಯತ್‌ನಲ್ಲಿ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ

0

ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ 2026-27ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ 2025-26ನೇ ಸಾಲಿನ 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ (ಸೋಷಿಯಲ್ ಆಡಿಟ್) ಗ್ರಾಮ ಸಭೆಯು ಜು. 27 ರಂದು ಬೆಳಿಗ್ಗೆ 11.00 ಗಂಟೆಗೆ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ಪುತ್ತೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದ್ದು, 2025-26ನೇ ಸಾಲಿನಲ್ಲಿ ನಡೆದ ಕಾಮಗಾರಿಗಳ ಪಾರದರ್ಶಕತೆ ಹಾಗೂ ಜವಾಬ್ದಾರಿಯುತ ನಿರ್ವಹಣೆಯ ಕುರಿತು ಚರ್ಚಿಸಲಾಗುವುದು. ಈ ಸಭೆಯಲ್ಲಿ ಗ್ರಾಮದ ಜನಪ್ರತಿನಿಧಿಗಳು, ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸ್ತ್ರೀ ಶಕ್ತಿ ಗುಂಪಿನ ಸದಸ್ಯರು ಹಾಗೂ ಉದ್ಯೋಗ ಚೀಟಿದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಡಾ| ಧರ್ಮಪಾಲ ಕೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಭಾಶ್ಚಂದ್ರ ಪಿ.ಜಿ, ಕಾರ್ಯದರ್ಶಿ ಜಯಂತಿ ಕೆ ಹಾಗೂ ಸಿಬ್ಬಂದಿ ವರ್ಗದವರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here