ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : ಆರೋಪಿ ಮನೀಷ್‌ಗೆ ಹೈಕೋರ್ಟ್ ಜಾಮೀನು

0

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಯಾಗಿರುವ ಮನೀಷ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.


2023 ನ.6ರಂದು ನೆಹರುನಗರದಲ್ಲಿ ರಾತ್ರಿ ವೇಳೆ ಅಕ್ಷಯ್ ಕಲ್ಲೇಗ ಅವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಪಡೀಲು ನಿವಾಸಿ ಮನೀಷ್, ಕೃಷ್ಣನಗರದ ಚೇತನ್, ಬನ್ನೂರಿನ ಮಂಜುನಾಥ್ ಯಾನೆ ಹರಿ ಹಾಗೂ ಕೇಶವ ಪಡೀಲ್ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಆ ಬಳಿಕ ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿತ್ತು. ಬಳಿಕದ ಬೆಳವಣಿಗೆಯಲ್ಲಿ ಹೈಕೋರ್ಟ್ ಕೂಡಾ ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ಪ್ರಕರಣದ 3ನೇ ಆರೋಪಿ ಮಂಜುನಾಥ್ ಶೆಣೈ ಮತ್ತು 4ನೇ ಆರೋಪಿ ಕೇಶವ ಅವರಿಗೆ ಕೆಲ ಸಮಯದ ಹಿಂದೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತುಬದ್ದ ಜಾಮೀನು ಮಂಜೂರು ಮಾಡಿತ್ತು. ಆ ಬಳಿಕದ ಬೆಳವಣಿಗೆಯಲ್ಲಿ, ಪ್ರಕರಣದ 1ನೇ ಆರೋಪಿ ಮನೀಶ್ ಮತ್ತು 2ನೇ ಆರೋಪಿ ಚೇತನ್ ಅವರು ಜಾಮೀನು ಕೋರಿ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ನ್ಯಾಯಾಲಯ ತಿರಸ್ಕೃತಗೊಳಿಸಿತ್ತು. ಇದೀಗ ಆರೋಪಿ ಮನೀಷ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

LEAVE A REPLY

Please enter your comment!
Please enter your name here