






ಪುತ್ತೂರು: ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನ್ ವತಿಯಿಂದ ‘ಎಕ್ಸೆಲೆನ್ಸಿಯಾ-2026’ ಕಾರ್ಯಕ್ರಮವನ್ನು ಆ.16ರಂದು ನೇರಳಕಟ್ಟೆ ಜನಪ್ರಿಯ ಗಾರ್ಡನ್ನಲ್ಲಿ ನಡೆಯಲಿದೆ.


“Beyond Marks, Beyond Obstacles” ಎಂಬ ಘೋಷವಾಕ್ಯದಡಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಾಧಕರಿಗೆ ಸನ್ಮಾನ, ರ್ಯಾಂಕ್ ಗಳಿಸಿದ ವಿದ್ಯಾರ್ಥಿಗಳ ಯಶಸ್ಸಿನ ಪಯಣದ ಹಂಚಿಕೆ, ಗಣ್ಯರಿಂದ ಪ್ರೇರಣಾದಾಯಕ ಉಪನ್ಯಾಸ ಹಾಗೂ ಯುವಜನತೆಗೆ ಸ್ಪೂರ್ತಿ ತುಂಬುವ ವಿಶೇಷ ಅಧಿವೇಶನ ನಡೆಯಲಿವೆ.



ಬೆಳಿಗ್ಗೆ 9 ಗಂಟೆಗೆ ಆರಂಭಗೊಳ್ಳಲಿರುವ ಕಾರ್ಯಕ್ರಮವನ್ನು ಇಇಎಫ್ ಕೌನ್ಸಿಲರ್ ಡಾ. ವಾಜಿದಾ ಬಾನು ನಡೆಸಿಕೊಡಲಿದ್ದು, ಪ್ರೇರಣಾದಾಯಕ ಭಾಷಣಕಾರ ರಫೀಕ್ ಮಾಸ್ಟರ್ ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಎಜುಕೇಶನಲ್ ಎಕ್ಸೆಲೆನ್ಸ್ ಫೌಂಡೇಶನ್ನ ಅಧ್ಯಕ್ಷ ಅಮ್ಜದ್ ಖಾನ್ ಪೋಳ್ಯ ತಿಳಿಸಿದ್ದಾರೆ.










