ಶಟಲ್ ಬ್ಯಾಡ್ಮಿಂಟನ್; ರಾಮಕುಂಜ ಆ.ಮಾ.ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇವರ ಆಶ್ರಯದಲ್ಲಿ ಕಡಬ ತಾಲೂಕಿನ ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆಯಲ್ಲಿ ಜು.29ರಂದು ನಡೆದ ಕಡಬ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


17ರ ವಯೋಮಾನದ ಬಾಲಕರ ವಿಭಾಗದಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಾದ ಗೌತಮ್ ಬಿ.ಎಂ., ಜೀವನ್ ಕೋಡಿಬೈಲ್ ಮತ್ತು ಶ್ರೇಷ್ಠ ಪಿ.ವಿ. ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ. ಸೇಸಪ್ಪ ರೈಯವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ತರಬೇತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here