ಚೆಸ್ ಪಂದ್ಯಾಟ: ರಾಮಕುಂಜ ಆ.ಮಾ.ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇವರ ಆಶ್ರಯದಲ್ಲಿ ಕಡಬ ತಾಲೂಕಿನ ಕೊಣಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜು.27ರಂದು ನಡೆದ ಕಡಬ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ವಿಭಾಗದ ಚದುರಂಗ ಸ್ಪರ್ಧೆಯಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


14ರ ವಯೋಮಾನದ ಬಾಲಕರ ವಿಭಾಗದಲ್ಲಿ ನಿನಾದ್ ಎ.ಜೆ.(7ನೇ) ನಾಲ್ಕನೇ ಸ್ಥಾನ, 17ರ ವಯೋಮಾನದ ಬಾಲಕರ ವಿಭಾಗದಲ್ಲಿ ರಿತ್ವಿ ಎ.ಜೆ( 9ನೇ) ದ್ವಿತೀಯ ಸ್ಥಾನ ಮತ್ತು ರೋನಿತ್ ಡಿ.(9ನೇ) ನಾಲ್ಕನೇ ಸ್ಥಾನ ಪಡೆದು ತಾಲೂಕು ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ತರಬೇತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here