







ಪುತ್ತೂರು: ಕರ್ನಾಟಕ ಸರಕಾರ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಅನಂತ್ ಮೈಸೂರುರವರು ಆ.1ರಂದು ಪುತ್ತೂರಿಗೆ ಆಗಮಿಸಲಿದ್ದಾರೆ.


ಬೆಳಿಗ್ಗೆ 11.30ಕ್ಕೆ ಪುತ್ತೂರು ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರಕ್ಕೆ ಭೇಟಿ ನೀಡಿ, ಶ್ರೀ ಮಹಾಲಕ್ಷ್ಮೀ ಸಭಾಭವನದಲ್ಲಿ ಸಮುದಾಯದ ಮುಖಂಡರೊಂದಿಗೆ ಸಮಾಲೋಚನಾ ಸಭೆ ನಡೆಯಲಿದೆ. ಯೋಜನೆ/ಕಾರ್ಯಕ್ರಮಗಳ ಬಗ್ಗೆ ಸಹಾಯಕ ಅಭಿವೃದ್ಧಿ ಅಧಿಕಾರಿಯೊಂದಿಗೆ ಚರ್ಚೆ ನಡೆಸಲಿದ್ದಾರೆ. ಬಳಿಕ ಪುತ್ತೂರು ಗಾಣಿಗ ಸಮಾಜ ಬಾಂಧವರಿಂದ ಗೌರವಾರ್ಪಣೆ ನಡೆಯಲಿದೆ ಎಂದು ಪುತ್ತೂರು ತಾಲೂಕು ಗಾಣಿಗ ಯಾನೆ ಸಫಲಿಗರ ಸೇವಾ ಸಂಘ (ರಿ.) ಇದರ ಅಧ್ಯಕ್ಷ ಲಕ್ಷ್ಮೀ ಪ್ರಸಾದ್ ಬೆಟ್ಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













