







ಮಂಗಳೂರು:ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು,ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಆ.01ರಂದು ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ ಕೇಂದ್ರಗಳು,ಸರ್ಕಾರಿ,ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಆದೇಶ ಹೊರಡಿಸಿದ್ದಾರೆ.












