ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆ ಮುಖ್ಯಶಿಕ್ಷಕರಾಗಿ ವೆಂಕಟೇಶ ದಾಮ್ಲೆ

0

ರಾಮಕುಂಜ: ಕಡಬ ತಾಲೂಕಿನ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ರಾಜ್ಯ ಪ್ರಶಸ್ತಿ ಪುರಸ್ಕೃತ ಸತೀಶ್ ಭಟ್ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ, ಶಾಲೆಯ ಗಣಿತ ಶಿಕ್ಷಕರಾದ ವೆಂಕಟೇಶ್ ದಾಮ್ಲೆ ಅವರು ನೂತನ ಮುಖ್ಯ ಶಿಕ್ಷಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ.


ದೀರ್ಘ ಕಾಲದಿಂದ ಶಾಲೆಯಲ್ಲಿ ಗಣಿತ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೆಂಕಟೇಶ ದಾಮ್ಲೆ ಅವರ ನೇತೃತ್ವದಲ್ಲಿ ಶಾಲೆ ಇನ್ನಷ್ಟು ಅಭಿವೃದ್ಧಿಯತ್ತ ಸಾಗಲಿ ಎಂದು ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಹಳೆಯ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here