ಶ್ರೀ ರಾಮಕುಂಜೇಶ್ವರ ಪ್ರೌಢಶಾಲಾ ಮುಖ್ಯಗುರು ಸತೀಶ್ ಭಟ್‌ರಿಗೆ ಬೀಳ್ಕೊಡುಗೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರಾಜ್ಯ ಪ್ರಶಸ್ತಿ ಪುರಸ್ಕೃತ ಸತೀಶ್ ಭಟ್ ಬಿಳಿನೆಲೆ ಅವರು ಸೇವಾ ನಿವೃತ್ತಿ ಹಿನ್ನಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ಶಾಲೆಯಲ್ಲಿ ನಡೆಯಿತು.


ಶಾಲಾ ವಿದ್ಯಾರ್ಥಿಗಳು ಹಾಗೂ ಹಿರಿಯ ವಿದ್ಯಾರ್ಥಿಗಳು ಸತೀಶ್ ಭಟ್ ಅವರಿಗೆ ವಿವಿಧ ಉಡುಗೊರೆಗಳನ್ನು ನೀಡಿ ಗೌರವ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಅನಿಸಿಕೆಗಳನ್ನು ಹಂಚಿಕೊಂಡು, ಸತೀಶ್ ಭಟ್ ಅವರ ಮಾರ್ಗದರ್ಶನ, ಶಿಸ್ತು, ಪ್ರೀತಿ ಹಾಗೂ ಪ್ರೇರಣಾದಾಯಕ ಬೋಧನೆಯನ್ನು ಸ್ಮರಿಸಿದರು.

ಶಾಲೆಯ ಶಿಕ್ಷಕರೂ ಅನಿಸಿಕೆಗಳನ್ನು ವ್ಯಕ್ತಪಡಿಸಿ, ಸತೀಶ್ ಭಟ್ ಅವರು ಉತ್ತಮ ವ್ಯಕ್ತಿತ್ವ, ಸರಳತೆ, ಸಮರ್ಪಣಾ ಮನೋಭಾವ ಹಾಗೂ ಆದರ್ಶ ನಾಯಕತ್ವದ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಪ್ರಶಂಸಿಸಿದರು. ಸತೀಶ್ ಭಟ್ ಅವರಿಗೆ ಶಾಲು ಹೊದಿಸಿ, ಫಲ ತಾಂಬೂಲ ನೀಡಿ ಸನ್ಮಾನಿಸಿ ಗೌರವಿಸಿದರು.

LEAVE A REPLY

Please enter your comment!
Please enter your name here