







ಪುತ್ತೂರು: ರಾಹುಲ್ ಗಾಂಧಿಯವರ ವಿರುದ್ಧ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ನೀಡಿರುವ ಹೇಳಿಕೆಯನ್ನು ಖಂಡಿಸಿ ಆ.1ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಅವರ ನೇತೃತ್ವದಲ್ಲಿ ಪುತ್ತೂರಿನಿಂದ ಹಲವು ಮಂದಿ ಭಾಗವಹಿಸಿದ್ದರು.


ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್, ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡಿಸೋಜ, ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಟಿ ತೌಸೀಫ್, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಾ.ರಾಜಾರಾಮ ಕೆ.ಬಿ., ವಿಕ್ರಂ ರೈ ಸಾಂತ್ಯ, ಸಂಜೀವ ರೈ ಸಹಿತ ಹಲವು ಮಂದಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.













