ಕೌಕ್ರಾಡಿ: ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ : ಸಂಚಾರಕ್ಕೆ ಅಡಚಣೆ

0

ನೆಲ್ಯಾಡಿ: ಭಾರೀ ಗಾಳಿ ಹಾಗೂ ಮಳೆಗೆ ಬೃಹತ್ ಮರವೊಂದು ಮುರಿದು ರಸ್ತೆಗೆ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಧರ್ಮಸ್ಥಳ-ಸುಬ್ರಹ್ಮಣ್ಯ ರಸ್ತೆಯ ಕೌಕ್ರಾಡಿ ಗ್ರಾಮದ ದಡ್ಡಲಪಳಿಕೆ ಎಂಬಲ್ಲಿ ಆ.1ರಂದು ನಡೆದಿದೆ.


ದಡ್ಡಲಪಳಿಕೆ ಎಂಬಲ್ಲಿ ರಸ್ತೆ ಬದಿಯಿದ್ದ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡವಾಗಿ ಬಿದ್ದಿದೆ. ಇದರಿಂದಾಗಿ ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಸುಮಾರು 1 ತಾಸು ಅಡಚಣೆ ಉಂಟಾಗಿತ್ತು. ಕೆಲವೊಂದು ವಾಹನಗಳು ಪರ್ಯಾಯ ರಸ್ತೆಯಲ್ಲಿ ಸಂಚರಿಸಿದವು. ಘಟನಾ ಸ್ಥಳಕ್ಕೆ ಉಪವಲಯ ಅರಣ್ಯಾಧಿಕಾರಿ ವಿನಯ್, ನೆಲ್ಯಾಡಿ ಹೊರಠಾಣೆ ಪೊಲೀಸರು ಆಗಮಿಸಿ ಸ್ಥಳೀಯರ ಸಹಕಾರದೊಂದಿಗೆ ಮರ ತೆರವುಗೊಳಿಸಿದರು. ಸುಮಾರು 1 ತಾಸಿನ ಬಳಿಕ ಸದ್ರಿ ರಸ್ತೆಯಲ್ಲಿ ವಾಹನ ಸಂಚಾರ ಪುನರಾರಂಭಗೊಂಡಿತು. ಈ ಭಾಗದಲ್ಲಿ ರಸ್ತೆಯ ಪಕ್ಕದಲ್ಲಿ ಹಲವು ಬೃಹತ್ ಮರಗಳು ಅಪಾಯಕಾರಿಯಾಗಿ ರಸ್ತೆಗೆ ವಾಲಿಕೊಂಡಿದ್ದು ಅವುಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here