







ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಿಪಾಡಿ ಗ್ರಾಮದ ಹೆಗ್ಡೆಹಿತ್ಲು ಎಂಬಲ್ಲಿ ರಸ್ತೆಗೆ ವಾಲಿಕೊಂಡಿರುವ ಬೃಹತ್ ಮರವನ್ನು ತಕ್ಷಣ ತೆರವುಗೊಳಿಸಬೇಕೆಂದು ಪದ್ಮಪ್ಪ ಪೂಜಾರಿ ಪರನೀರು ಅವರು ವಲಯ ಅರಣ್ಯಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.



ಬೆಳ್ಳಿಪಾಡಿ ಗ್ರಾಮದ ಹೆಗ್ಡೆಹಿತ್ಲು ಎಂಬಲ್ಲಿ ರಸ್ತೆಗೆ ವಾಲಿಕೊಂಡಿರುವ ದೇವದಾರು ಮರ ಅಪಾಯಕಾರಿ ಸ್ಥಿತಿಯಲ್ಲಿದೆ. ಶಾಲಾ ವಾಹನಗಳು, ಸರಕಾರಿ ಬಸ್, ಆಟೋ ಹಾಗೂ ಇತರ ಖಾಸಗಿ ವಾಹನಗಳು ನಿತ್ಯ ಸಂಚರಿಸುತ್ತವೆ. ಮರದ ಪಕ್ಕದಲ್ಲೇ ಹಲವಾರು ವಿದ್ಯುತ್ ಕಂಬಗಳು ಮತ್ತು ವಿದ್ಯುತ್ ತಂತಿಗಳು ಹಾದು ಹೋಗಿವೆ. ಮಳೆ ಅಥವಾ ಗಾಳಿಗೆ ಮರ ಉರುಳಿ ಬಿದ್ದಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿ ವಿದ್ಯುತ್ ವ್ಯತ್ಯಯ ಮತ್ತು ದೊಡ್ಡ ಅಪಘಾತ ಸಂಭವಿಸುವ ಸಾಧ್ಯತೆಯಿದೆ.



ಸಾರ್ವಜನಿಕ ಹಿತದೃಷ್ಟಿಯಿಂದ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಅಪಾಯಕಾರಿ ಮರವನ್ನು ತೆರವುಗೊಳಿಸಬೇಕು ಎಂದು ಮನವಿಯಲ್ಲಿ ಪದ್ಮಪ್ಪ ಪೂಜಾರಿ ತಿಳಿಸಿದ್ದಾರೆ. ಈ ಮನವಿಯ ಪ್ರತಿಯನ್ನು ಶಾಸಕರಿಗೂ ಕಳುಹಿಸಲಾಗಿದೆ.










