






ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ಸಾರ್ವಜನಿಕ ರಸ್ತೆ ನಿರ್ಮಾಣದ ಗೊಂದಲ ಬಗ್ಗೆ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲೆ ವತಿಯಿಂದ ಪ್ರಮುಖರ ಸಭೆ ಆ.2ರಂದು ಕಲ್ಲಾರೆ ರಾಘವೇಂದ್ರ ಮಠದ ವಠಾರದಲ್ಲಿ ನಡೆಯಿತು.


ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಆಡಳಿತ ಮಂಡಳಿಗೆ ಹಲವು ಬೇಡಿಕೆಗಳನ್ನು ಆಗ್ರಹಿಸಿ ಆ.3ರಂದು ಬೆಳಿಗ್ಗೆ ಗಂಟೆ 10ಕ್ಕೆ ಮನವಿ ನೀಡುವ ಕುರಿತು ನಿರ್ಣಯಿಸಲಾಯಿತು.



ದೇವಸ್ಥಾನದ ಜಾಗದಲ್ಲಿ ಸಾರ್ವಜನಿಕ ರಸ್ತೆ ನಿರ್ಮಾಣ ಮತ್ತು ನಾಗ, ಅಯ್ಯಪ್ಪ ಮತ್ತು ನವಗ್ರಹ ಗುಡಿಗಳಿಗನ್ನು ಸ್ಥಳಾಂತರದ ನಂತರ ಹಾಗೂ ನಟರಾಜ ವೇದಿಕೆಯನ್ನು ತೆರವು ಮಾಡಿರುವುದು ಭಕ್ತರಲ್ಲಿ ಗೊಂದಲವಾಗಿದೆ ಎಂದು ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲೆಯ ವತಿಯಿಂದ ಭಕ್ತರ ಭಾವನೆಗಳಿಗೆ ಅನುಗುಣವಾಗಿ ದೇವಸ್ಥಾನದ ಆಡಳಿತ ಮಂಡಳಿಯು ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಧಾರಗಳನ್ನು ಮಾಡಬೇಕು ಎಂದು ಚರ್ಚಿಸಲಾಯಿತು.
ವಿಶ್ವಹಿಂದು ಪರಿಷತ್ ಕರ್ನಾಟಕ ಪ್ರಾಂತ ಉಪಾಧ್ಯಕ್ಷ ಯು.ಪೂವಪ್ಪ, ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಮುರಳಿಕೃಷ್ಣ ಹಸಂತಡ್ಕ, ಉದ್ಯಮಿ ಸೀತಾರಾಮ ರೈ ಕೆದಂಬಾಡಿಗುತ್ತು, ಮಾದವ ಪೂಜಾರಿ, ಭರತ್ ಸಹಿತ ಹಲವಾರು ಮಂದಿ ಸಭೆಯಲ್ಲಿ ವಿಚಾರಗಳ ಕುರಿತು ಚರ್ಚಿಸಿದರು.










