ಮುಕ್ಕೂರಿನಲ್ಲಿ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಹಾಗೂ ಅಂತರ್ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ : ಆಮಂತ್ರಣ ಪತ್ರಿಕೆ ಬಿಡುಗಡೆ

0

ಮುಕ್ಕೂರು ಗಣೇಶೋತ್ಸವ ಹತ್ತೂರಿಗೆ ಮಾದರಿ : ನಳಿನ್


ಪುತ್ತೂರು: ಸವಣೂರು ಸಮೀಪದ ಮುಕ್ಕೂರು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಸೆ. 13 ಮತ್ತು 14ರಂದು ನಡೆಯಲಿರುವ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಹಾಗೂ ಅಂತರ್ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯ ಆಮಂತ್ರಣ ಪತ್ರಿಕೆಯನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯ ಹಾಗೂ ನೇಸರ ದಶ ಪ್ರಣತಿ ಸಮಿತಿಯ ಗೌರವಾಧ್ಯಕ್ಷ ನಳಿನ್ ಕುಮಾರ್ ಕಟೀಲು ಬಿಡುಗಡೆಗೊಳಿಸಿದರು.

ಕುಂಜಾಡಿಯಲ್ಲಿರುವ ತಮ್ಮ ನಿವಾಸದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಅವರು, ಗಣೇಶೋತ್ಸವದ ಅಂಗವಾಗಿ ಆಯೋಜಿಸಿರುವ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸ್ಪರ್ಧಾತ್ಮಕ ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲು, “ಮುಕ್ಕೂರು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಳೆದ ಹಲವು ವರ್ಷಗಳಿಂದ ಸಮಾಜಮುಖಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸುತ್ತಿದ್ದು, ಹತ್ತೂರಿಗೆ ಮಾದರಿಯಾಗಿದೆ. ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಏಕತೆ, ಸಂಸ್ಕೃತಿ ಮತ್ತು ಪ್ರತಿಭೆಗಳಿಗೆ ಉತ್ತೇಜನ ನೀಡುವ ಕೆಲಸ ಮಾಡುತ್ತವೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಮುಕ್ಕೂರು ನೇಸರ ಯುವಕ ಮಂಡಲದ ಕೋಶಾಧಿಕಾರಿ ಶ್ರೀಧರ ಗೌಡ ಕೊಂಡೆಪ್ಪಾಡಿ, ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ ರಾಮಚಂದ್ರ ಚೆನ್ನಾವರ, ಕೋಶಾಧಿಕಾರಿ ಪ್ರಶಾಂತ್ ರೈ, ಸದಸ್ಯರಾದ ಜಯಂತ ಕುಂಡಡ್ಕ, ರವಿ ಕುಂಡಡ್ಕ, ಪ್ರವೀಣ್ ಬೋಳಕುಮೇರು, ಶೀನ ಅನವುಗುಂಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here