ಮುದ್ಯ: ವರಮಹಾಲಕ್ಷ್ಮೀ ಪೂಜೆ ಆಮಂತ್ರಣ ಪತ್ರಿಕೆ ಬಿಡುಗಡೆ

0

ನೆಲ್ಯಾಡಿ: ಬಜತ್ತೂರು ಗ್ರಾಮದ ಮುದ್ಯ ಶ್ರೀ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ 19ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಆ.೩ರಂದು ಬಿಡುಗಡೆ ಮಾಡಲಾಯಿತು.


ಬೆಳಗ್ಗೆ ದೇವಸ್ಥಾನದಲ್ಲಿ ನಿತ್ಯ ಪೂಜೆ ನಡೆಯಿತು. ನಂತರ 19ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಅರ್ಚಕ ಕೃಷ್ಣಪ್ರಸಾದ್ ಉಡುಪ ಅವರು ವರಮಹಾಲಕ್ಷ್ಮಿ ಪೂಜೆಯು ಯಶಸ್ವಿಯಾಗಿ ನಡಯಲಿ ಎಂದು ಶುಭ ಹಾರೈಸಿದರು. ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷೆ ಸುನೀತಾ ಕೊಡಿಪಾನರವರು ವರಮಹಾಲಕ್ಷ್ಮಿ ಪೂಜೆಯ ಯಶಸ್ವಿಗೆ ಎಲ್ಲರ ಸಹಕಾರ ಕೋರಿದರು.


ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸುಧಾ ರಾವ್ ದಾದುಕೋಡಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ವೇಣುಗೋಪಾಲ್ ನಾಯಕ್ ಕುಳ್ಳಾಜೆ, ಭಜನಾ ಮಂಡಳಿ ಅಧ್ಯಕ್ಷರಾದ ನಾರಾಯಣ ಪೂಜಾರಿ ನೀರಕಟ್ಟೆ, ವಸಂತಿ ಅತಿಕರಮಜಲು, ವರ ಮಹಾಲಕ್ಷ್ಮಿ ಪೂಜಾ ಸಮಿತಿ ಪದಾಧಿಕಾರಿಗಳು ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here