ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

0

ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು, ಸವಣೂರು ಇಲ್ಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಡ್ವಕೇಟ್ ಅಶ್ವಿನ್ ಎಲ್. ಶೆಟ್ಟಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, “ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಿಸಿಕೊಂಡಾಗ ಭವಿಷ್ಯದಲ್ಲಿ ಯಶಸ್ಸನ್ನು ತಮ್ಮದಾಗಿಸಿಕೊಳ್ಳಬಹುದು” ಎಂದರು.

ನೂತನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಕಾರ್ಯಕ್ರಮವನ್ನು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಟ್ರಸ್ಟಿಗಳಾದ ರಶ್ಮಿ ಅಶ್ವಿನ್ ಶೆಟ್ಟಿ ಅವರು ಉದ್ಘಾಟಿಸಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ರಾಜಲಕ್ಷ್ಮೀ ಎಸ್. ರೈ ಅವರು ಶೈಕ್ಷಣಿಕ ವರ್ಷದ ರೂಪುರೇಷೆಗಳನ್ನು ನೀಡಿ ಶುಭ ಹಾರೈಸಿದರು. ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್. ಆಳ್ವ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲೆ ರಂಜಿತಾ ಬಿ.ಆರ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲರನ್ನು ತೃತೀಯ ಬಿಸಿಎ ವಿದ್ಯಾರ್ಥಿ ಪ್ರಮೋದ್ ಸ್ವಾಗತಿಸಿದರು. ಇಂಚರ ವಂದಿಸಿದರು. ಕಾರ್ಯಕ್ರಮ ನಿರ್ವಹಣೆಯನ್ನು ತೃತೀಯ ಬಿಸಿಎ ವಿದ್ಯಾರ್ಥಿ ಮೊಹಮ್ಮದ್ ಸುಫೈದ್ ನಿರ್ವಹಿಸಿದರು.ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here