






ಉಪ್ಪಿನಂಗಡಿ: 34 ನೆಕ್ಕಿಲಾಡಿ ಹಾಲು ಉತ್ಪಾದಕರ ಸಂಘದ ಮಾಜಿ ಅಧ್ಯಕ್ಷ ದಿವಾಕರ ಪೂಜಾರಿ ಕೊಳಂಜಿಲಡ್ಡ (77) ಅವರು ಆ.4ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.


ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಪತ್ನಿ, ಎರಡು ಗಂಡು, ಒರ್ವ ಪುತ್ರಿಯನ್ನು ಅಗಲಿದ್ದಾರೆ.



ಕೊಡುಗೈ ದಾನಿಯಾಗಿದ್ದ ಇವರು ಸುಭಾಷ್ ನಗರದ ಸತ್ಯನಾರಾಯಣ ಭಜನಾ ಮಂದಿರದ ಮಾಜಿ ಅಧ್ಯಕ್ಷರಾಗಿ, ಉಪ್ಪಿನಂಗಡಿ ಸಿಎ ಬ್ಯಾಂಕ್‌ನ ನಿರ್ದೇಶಕರಾಗಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನ, ಅಂಬೆಳ ಗ್ರಾಮ ದೈವಸ್ಥಾನದ ಟ್ರಸ್ಟಿಯಾಗಿ ಕಾರ್ಯನಿರ್ವಹಿಸಿದ್ದರು.










