ವಿದ್ಯಾಭಾರತಿ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟ: ಶ್ರೀ ರಾಮಕುಂಜೇಶ್ವರ ವಿದ್ಯಾಲಯ(ಸಿಬಿಎಸ್‌ಇ)ಕ್ಕೆ ದ್ವಿತೀಯ ಸ್ಥಾನ

0

ರಾಮಕುಂಜ: ಆ.5ರಂದು ಪುತ್ತೂರು ವಿವೇಕಾನಂದ ಪಿ.ಯು ಕಾಲೇಜಿನಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ 14ರ ವಯೋಮಾನದ ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ವಿದ್ಯಾಲಯದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.


ವಿದ್ಯಾರ್ಥಿಗಳಿಗೆ ಶಾಲೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ, ಸಂಚಾಲಕ ಶಿವಪ್ರಸಾದ್ ಇಜ್ಜಾವು, ಪ್ರಾಂಶುಪಾಲ ಪ್ರವೀದ್ ಪಿ., ಅವರ ಮಾರ್ಗದರ್ಶನದಲ್ಲಿ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಕಿಶನ್‌ರಾಜ್ ರೈ ಯು., ಪ್ರೇಮ, ರಾಘವ, ದಿವ್ಯಾ ಅವರು ತರಬೇತಿ ನೀಡಿದ್ದರು.

LEAVE A REPLY

Please enter your comment!
Please enter your name here