ಆ.9: ನೆಲ್ಯಾಡಿ ವಲಯ ಬಂಟರ ಸಂಘದ ಆಶ್ರಯದಲ್ಲಿ ಆಟಿಡೊಂಜಿ ಬಂಟರ ಸೇರಿಗೆ, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ

0

ನೆಲ್ಯಾಡಿ: ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ಹಾಗೂ ತಾಲೂಕು ಬಂಟರ ಸಂಘ ಪುತ್ತೂರು ಇವರ ಮಾರ್ಗದರ್ಶನದಲ್ಲಿ ವಲಯ ಬಂಟರ ಸಂಘ ನೆಲ್ಯಾಡಿ ಇದರ ಆಶ್ರಯದಲ್ಲಿ ಆಟಿಡೊಂಜಿ ಬಂಟರ ಸೇರಿಗೆ, ಸಾಧಕರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಆ.9ರಂದು ಬೆಳಗ್ಗೆ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಲ್ಪವೃಕ್ಷ ಸಹಕಾರಿ ಸೌಧದಲ್ಲಿ ನಡೆಯಲಿದೆ.


ಬೆಳಗ್ಗೆ 9.30ರಿಂದ 11ರ ತನಕ ಹಿರಿಯ ಯಕ್ಷಗಾನ ಕಲಾವಿದ ವಿಠಲ ಮಾರ್ಲ ರಾಮನಗರ ಇವರ ಪ್ರಾಯೋಜಕತ್ವದಲ್ಲಿ ಶ್ರೀ ಹಿರಣ್ಮಯಿ ಮಹಿಳಾ ಯಕ್ಷಗಾನ ಕಲಾ ಸಂಘ ನೆಲ್ಯಾಡಿ ಇದರ ಸಂಚಾಲಕರಾದ ಲಕ್ಷ್ಮೀನಾರಾಯಣ ಶೆಟ್ಟಿ ಕುಂಡಡ್ಕ ಇವರ ನಿರ್ದೇಶನದಲ್ಲಿ ‘ಪವಿತ್ರ ತುಳಸಿ’ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.


ಪೂರ್ವಾಹ್ನ 11.30ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು ಶ್ರೀ ಬಾರ್ಕೂರು ಮಹಾಸಂಸ್ಥಾನದ ಶ್ರೀ ಡಾ| ವಿದ್ಯಾವಾಚಸ್ಪತಿ ವಿಶ್ವ ಸಂತೋಷ ಭಾರತಿ ಶ್ರೀಪಾದರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಧಾರ್ಮಿಕ, ಸಾಮಾಜಿಕ ಮುಂದಾಳು ತುಕ್ರಪ್ಪ ಶೆಟ್ಟಿ ನೂಜೆ ಉದ್ಘಾಟಿಸಲಿದ್ದಾರೆ. ನೆಲ್ಯಾಡಿ ವಲಯ ಬಂಟರ ಸಂಘದ ಅಧ್ಯಕ್ಷ ಪ್ರತಾಪ್‌ಚಂದ್ರ ರೈ ಕುದ್ಮಾರುಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ. ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ಇದರ ಪುತ್ತೂರು ತಾಲೂಕು ಸಮಿತಿ ಸಂಚಾಲಕರಾದ ಸಹಕಾರ ರತ್ನ ದಂಬೆಕ್ಕಾನ ಸದಾಶಿವ ರೈ ಸಾಧಕರನ್ನು ಸನ್ಮಾನಿಸಲಿದ್ದಾರೆ.

ರಾಷ್ಟ್ರೀಯ ವೈಟ್ ಲಿಫ್ಟಿಂಗ್ ತರಬೇತುದಾರ ಪ್ರಮೋದ್‌ಕುಮಾರ್ ಶೆಟ್ಟಿ ಮನವಳಿಕೆಗುತ್ತು ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷರಾದ ಹೇಮನಾಥ ಶೆಟ್ಟಿ ಕಾವು, ಪುತ್ತೂರು ಕೋಟಿ-ಚೆನ್ನಯ ಕಂಬಳ ಸಮಿತಿ ಅಧ್ಯಕ್ಷರಾದ ಚಂದ್ರಹಾಸ ಶೆಟ್ಟಿ ಎನ್., ಪುತ್ತೂರು ತಾಲೂಕು ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ, ಮಹಿಳಾ ವಿಭಾಗದ ಅಧ್ಯಕ್ಷೆ ಗೀತಾಮೋಹನ್ ರೈ, ಯುವ ಬಂಟರ ವಿಭಾಗದ ಅಧ್ಯಕ್ಷ ಭಾಗ್ಯೇಶ್ ರೈ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಾಧಕರಾದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಶ್ವನಾಥ ಶೆಟ್ಟಿ ಕುಂಡಡ್ಕ, ನಿವೃತ್ತ ಯೋಧ ಕರುಣಾಕರ ರೈ. ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿವೃತ್ತ ಮ್ಯಾನೇಜರ್ ರತ್ನಾಕರ ಬಂಟ್ರಿಯಾಲ್ ಪರಾರಿ, ಯುವ ವಾಗ್ಮಿ ಸಂಕೇತ್ ಶೆಟ್ಟಿ ನೆಲ್ಯಾಡಿ ಕೊಲ್ಯೊಟ್ಟು ಇವರಿಗೆ ಕಾರ್ಯಕ್ರಮದಲ್ಲಿ ಸನ್ಮಾನ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಪ್ರತಾಪಚಂದ್ರ ರೈ ಕುದ್ಮಾರುಗುತ್ತು, ಕಾರ್ಯದರ್ಶಿ ಮಹಾಬಲ ಶೆಟ್ಟಿ ದೋಂತಿಲ ಹಾಗೂ ಪದಾಧಿಕಾರಿ, ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here