






ಪುತ್ತೂರು: ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ ಸ್ಥಾಪಕಾಧ್ಯಕ್ಷ ಕೆ. ಬಿ. ಜಯಪಾಲ ಶೆಟ್ಟಿ ಪ್ರತಿಭಾ ಪುರಸ್ಕಾರ ಸಮಾರಂಭ ಮಂಗಳೂರಿನ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ., ಇದರ ಸದಸ್ಯರು ಮತ್ತು ಸಿಬ್ಬಂದಿಗಳ ಮಕ್ಕಳಿಗೆ ಶೈಕ್ಷಣಿಕ ಸಾಧನೆಗಾಗಿ ಸ್ಥಾಪಕಾಧ್ಯಕ್ಷ ಕೆ.ಬಿ. ಜಯಪಾಲ ಶೆಟ್ಟಿ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭವು ಆ.9 ರಂದು ಅಪರಾಹ್ನ 3:00 ಗಂಟೆಗೆ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಕಟ್ಟಡದ 5ನೇ ಮಹಡಿಯ ಹಾಲ್‌ನಲ್ಲಿ ಜರಗಲಿದೆ.


ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೆ. ಜೈರಾಜ್ ಬಿ. ರೈಯವರು ವಹಿಸಲಿದ್ದಾರೆ ಉದ್ಘಾಟನೆಯನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇರವೇರಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಂಗಳೂರು ನಗರ ಪೊಲೀಸ್‌ನ ಸಂಚಾರ ಉಪವಿಭಾಗದ ಸಹಾಯಕ ಪೊಲೀಸ್ ಕಮಿಶನರ್ ನಾ ಫಾರೂಖೀಯವರು ಭಾಗವಹಿಸಲಿದ್ದಾರೆ.



ಈ ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ. ಮತ್ತು ವೃತ್ತಿಪರ ಪದವಿಯ 114 ವಿದ್ಯಾರ್ಥಿಗಳಿಗೆ ಒಟ್ಟು ರೂ. 12 ಲಕ್ಷದಷ್ಟು ಪ್ರತಿಭಾ ಪುರಸ್ಕಾರ ಬಹುಮಾನವನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.









