ಅಂಬಿಕಾ ಪ.ಪೂ.ವಿದ್ಯಾಲಯದ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದಲ್ಲಿ ಬಹುಮಾನ

0

ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ವಿದ್ಯಾಭಾರತಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಬಹುಮಾನ ಪಡೆದುಕೊಂಡಿದ್ದಾರೆ.

ಕಲಬುರ್ಗಿ ಜಿಲ್ಲಾ ಮೈದಾನದಲ್ಲಿ ನಡೆದ ಕ್ರೀಡಾಕೂಟದಲ್ಲಿ ತರುಣ ವರ್ಗದಿಂದ ಭಾಗವಹಿಸಿದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ವಿಘ್ನೇಶ್ ಸಿ ರೈ ಗುಂಡು ಎಸೆತ ಪ್ರಥಮ, ಚಕ್ರ ಎಸೆತ ದ್ವಿತೀಯ, ಕೆ ಸುಹಾನ್ ಎನ್ ರೈ ಉದ್ದ ಜಿಗಿತ ದ್ವಿತೀಯ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾದ ಲಾಸ್ಯ ಸಂತೋಷ್ ಚಕ್ರ ಎಸೆತ ದ್ವಿತೀಯ, ಈಟಿ ಎಸೆತ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದು, ಈ ಮೂವರೂ ವಿದ್ಯಾರ್ಥಿಗಳು ದಕ್ಷಿಣ ಕ್ಷೇತ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here