






ಎನ್‌ಎಸ್‌ಎಸ್ ಚಟುವಟಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ- ಡಾ. ಹರಿಪ್ರಸಾದ್ ಎಸ್.


ಪುತ್ತೂರು: ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯು (NSS) ಪ್ರಮುಖ ಪಾತ್ರ ವಹಿಸುತ್ತದೆ. ಎನ್‌ಎಸ್‌ಎಸ್ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಅತ್ಯಂತ ಪೂರಕವಾಗಿವೆ ಎಂದು ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ಹರಿಪ್ರಸಾದ್ ಎಸ್. ಹೇಳಿದರು. ಅವರು ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಸಮಾಜಸೇವೆಯ ಮೌಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕವಾಗಿ ಮಾತನಾಡಿದರು.



ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಂ| ಆಂಟನಿ ಪ್ರಕಾಶ್ ಮೊಂತೇರೊ ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲೇ ಸಮಾಜಮುಖಿ ಚಿಂತನೆಗಳನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು. ವೇದಿಕೆಯಲ್ಲಿ ಘಟಕ ನಾಯಕ ಬೃಂದನ್ ಹಾಗೂ NSS ಕಾರ್ಯದರ್ಶಿ ಕಾರ್ತಿಕ್ ಉಪಸ್ಥಿತರಿದ್ದರು. NSS ಅಧಿಕಾರಿ ಡಾ| ಕೆ. ಚಂದ್ರಶೇಖರ್ ಪ್ರಾಸ್ತಾವಿಕ ಮಾತನಾದರು. ಪುಷ್ಪ ಎನ್. ಸ್ವಾಗತಿಸಿದರು. ಘಟಕ ನಾಯಕರಾದ ಸಾಯಿ ಪ್ರತೀಶ್ ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಘಟಕ ನಾಯಕಿ ಸ್ಪಂದನಾ ಕಾರ್ಯಕ್ರಮ ನಿರೂಪಿಸಿದರು. ಶಿಲ್ಪಾ ವಂದಿಸಿದರು. ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.










