






ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ಕಾಂಚನ ಕ್ರಾಸ್ ಎಂಬಲ್ಲಿ ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿಯಾಗಿರುವ ಘಟನೆ ಆ.೮ರಂದು ಮಧ್ಯಾಹ್ನ ನಡೆದಿದೆ.


ಬಜತ್ತೂರು ನಿವಾಸಿ ಬಾಬು (೫೦ವ.)ಗಾಯಗೊಂಡವರಾಗಿದ್ದಾರೆ. ಬಾಬು ಅವರು ಕಾಂಚನದಿಂದ ನೀರಕಟ್ಟೆ ಕಡೆಗೆ ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕ್ರಾಂಚನ ಕ್ರಾಸ್ನಲ್ಲಿ ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಕಾರು ಡಿಕ್ಕಿಯಾಗಿದೆ. ಘಟನೆಯಲ್ಲಿ ಬಾಬು ಅವರು ರಸ್ತೆಗೆ ಬಿದ್ದು ಗಾಯಗೊಂಡಿದ್ದರೂ ಕಾರು ಚಾಲಕ ಗಾಯಾಳುವನ್ನು ಆಸ್ಪತ್ರೆಗೂ ಸೇರಿಸದೆ, ಪೊಲೀಸರಿಗೂ ಮಾಹಿತಿ ನೀಡದೇ ಸ್ಥಳದಿಂದ ಪರಾರಿಯಾಗಿರುವುದಾಗಿ ವರದಿಯಾಗಿದೆ.



ಗಾಯಾಳು ಬಾಬು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬಾಬು ಅವರು ನೀಡಿದ ದೂರಿನಂತೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.










