







ವಿಟ್ಲ: ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದ ಘಟನೆ ಬಂಟ್ವಾಳ ತಾಲೂಕು ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಬಳಿ ನಡೆದಿದೆ.


ವಿಟ್ಲದ ಖಾಸಗಿ ಶಾಲೆಗಳ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸು ಕುಂಟುಕುಡೇಲು ತಲುಪುತ್ತಿದ್ದಂತೆ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.



ಡಿಕ್ಕಿಯಾದ ಸಂದರ್ಭದಲ್ಲಿ ವಿದ್ಯುತ್ ತಂತಿ ಬಸ್ಗೆ ತಾಗಲು ಕೇವಲ 1 ಅಡಿ ಅಂತರ ಮಾತ್ರ ಬಾಕಿ ಇತ್ತು. ಇದನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಹಾಗೂ ಲಯನ್ಸ್ ಕ್ಲಬ್ ವಿಟ್ಲ ವಲಯ ಅಧ್ಯಕ್ಷರಾದ ರಜಿತ್ ಆಳ್ವ ಅವರು ತಕ್ಷಣವೇ ವಿದ್ಯುತ್ ಲೈನ್ ಅನ್ನು ತಕ್ಷಣ ಆಫ್ ಮಾಡಿಸಿದರು. ಅವರ ಸಮಯಪ್ರಜ್ಞೆಯಿಂದಾಗಿ ಬಸ್ನಲ್ಲಿದ್ದ ಮಕ್ಕಳು ಮತ್ತು ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದಾರೆ.










