







ಪುತ್ತೂರು: ಸಿಮೆಂಟ್ ಮಿಕ್ಸರ್ ಲಾರಿಯೊಂದು ತಿರುವು ಪಡೆಯುವ ವೇಳೆ ನಿಯಂತ್ರಣ ತಪ್ಪಿ ಚರಂಡಿಗೆ ಸಿಲುಕಿದ ಘಟನೆ ಆ.11ರ ರಾತ್ರಿ ಬೊಳುವಾರು–ಉರ್ಲಾಂಡಿ ಸಂಪರ್ಕ ರಸ್ತೆಯಲ್ಲಿ ನಡೆದಿದೆ.


ಬೊಳುವಾರಿನಿಂದ ಉರ್ಲಾಂಡಿ ಕಡೆಗೆ ತೆರಳುತ್ತಿದ್ದ ಸಿಮೆಂಟ್ ಮಿಕ್ಸರ್ ಲಾರಿ ಉರ್ಲಾಂಡಿ ರಸ್ತೆಯಲ್ಲಿ ತಿರುವು ಪಡೆಯುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿದೆ. ಈ ವೇಳೆ ಲಾರಿಯ ಮುಂಭಾಗದ ಚಕ್ರವೊಂದು ರಸ್ತೆಯ ಬದಿಯ ಚರಂಡಿಗೆ ಬಿದ್ದು ಸಿಲುಕಿಕೊಂಡಿದೆ.



ಘಟನೆಯಿಂದ ಉರ್ಲಾಂಡಿ ಸಂಪರ್ಕ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಯಿತು. ಬಳಿಕ ಲಾರಿಯನ್ನು ಚರಂಡಿಯಿಂದ ಮೇಲಕ್ಕೆತ್ತಿ ತೆರವುಗೊಳಿಸುವ ಕಾರ್ಯ ನಡೆಯಿತು.










