







ಪುತ್ತೂರು: ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂತ ಫಿಲೋಮಿನಾ ದಿನಾಚರಣೆಯನ್ನು ಆಚರಿಸಲಾಯಿತು.


ಶಾಲೆಯ ಸಿಲ್ವರ್ ಜುಬಿಲಿ ಮೆಮೋರಿಯಲ್ ಹಾಲ್ನಲ್ಲಿ ಪವಿತ್ರ ಬಲಿಪೂಜೆ ನೆರವೇರಿತು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಗಣ್ಯರು ಸಂತ ಫಿಲೋಮಿನಾ ಅವರ ಪವಿತ್ರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.




ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸಂತ ಫಿಲೋಮಿನಾ ಅವರ ಜೀವನ, ಸೇವಾ ಮನೋಭಾವ ಹಾಗೂ ಆದರ್ಶಗಳ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಪೋಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ಲ್ಯಾನ್ಸಿ ಮಸ್ಕರೇನ್ಹಸ್ ಅವರು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು.

ಶಾಲೆಯ ವಿದ್ಯಾರ್ಥಿಗಳು ಶಟಲ್ ಬ್ಯಾಡ್ಮಿಂಟನ್ ಹಾಗೂ ಟೇಬಲ್ ಟೆನ್ನಿಸ್ ಪಂದ್ಯಾವಳಿಗಳಲ್ಲಿ ವಲಯ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ವಿಜೇತ ವಿದ್ಯಾರ್ಥಿಗಳನ್ನು ಗೌರವಿಸಿ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಮಾಯಿದೆ ದೇವುಸ್ ಚರ್ಚಿನ ಸಹಾಯಕ ಧರ್ಮಗುರುಗಳಾದ ವಿವಿಯನ್ ರೋಡ್ರಿಗಸ್ ಅವರು ವಿದ್ಯಾರ್ಥಿಗಳನ್ನು ಅಭಿನಂದಿಸಿ ಆಶೀರ್ವಚನ ನೀಡಿದರು. ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.










