






ಪುತ್ತೂರು: ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಪುತ್ತೂರು ಸಹಿತ ಒಂಬತ್ತು ತಾಲೂಕು ಕಚೇರಿಗಳಿಗೆ ಏಕಕಾಲದಲ್ಲಿ ಭೇಟಿ ನೀಡಿ ಕಡತಗಳನ್ನು ಪರಿಶೀಲನೆ ನಡೆಸಿದರು.


ಇದರ ಅಂಗವಾಗಿ ಪುತ್ತೂರು ತಾಲೂಕು ಕಚೇರಿಗೂ ಲೋಕಾಯುಕ್ತ ತಂಡ ಭೇಟಿ ನೀಡಿ ವಿವಿಧ ವಿಭಾಗಗಳ ಕಡತಗಳು ಹಾಗೂ ದಾಖಲೆಗಳನ್ನು ಪರಿಶೀಲಿಸಿದರು. ಕಚೇರಿಯಲ್ಲಿನ ಕಡತಗಳ ವಿಲೇವಾರಿ, ಬಾಕಿ ಇರುವ ಅರ್ಜಿಗಳು ಹಾಗೂ ಪ್ರಕರಣಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದರು.



ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳು ಮತ್ತು ಕಡತಗಳನ್ನು ಪರಿಶೀಲಿಸುವ ಉದ್ದೇಶದಿಂದ ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ, ಬಂಟ್ವಾಳ, ಮಂಗಳೂರು, ಮೂಡಬಿದರೆ ಹಾಗೂ ಮುಲ್ಕಿ ತಾಲೂಕು ಕಚೇರಿಗಳಿಗೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.










