







ಪುತ್ತೂರು: ಆ.7ರಂದು ಪುತ್ತೂರಿನಲ್ಲಿ ಯಶಸ್ವಿಯಾಗಿ ನಡೆದ ರಾಜ್ಯದ ಪ್ರಥಮ ಬೃಹತ್ ತಿರಂಗಾ ಯಾತ್ರೆಯ ಹಿನ್ನೆಲೆಯಲ್ಲಿ ಆ.12ರಂದು ಪುತ್ತೂರಿನ ಉರ್ಲಾಂಡಿ ರಸ್ತೆಯ ವಿದ್ಯಾ ಗೌರಿ ಅವರ ನಿವಾಸದ ಬಳಿಯ ಹಾಲ್‌ನಲ್ಲಿ ಅವಲೋಕನಾ ಸಭೆ ನಡೆಯಿತು. ಈ ಸಂದರ್ಭದಲ್ಲಿ ತಿರಂಗಾ ಯಾತ್ರೆಯ ಯಶಸ್ಸಿಗೆ ಶ್ರಮಿಸಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರನ್ನು ಅಭಿನಂದಿಸಲಾಯಿತು.



ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಕಾರ್ಯಕರ್ತರನ್ನು ಅಭಿನಂದಿಸಿ ಮಾತನಾಡಿದರು. ಪಕ್ಷದ ಸಂಘಟನೆ ಹಾಗೂ ಸಂಘಟನೆಯ ಬೆಳವಣಿಗೆಯಲ್ಲಿ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದ್ದು, ಒಗ್ಗಟ್ಟಿನ ಪ್ರಯತ್ನದಿಂದ ಬೃಹತ್ ತಿರಂಗಾ ಯಾತ್ರೆ ಯಶಸ್ವಿಯಾಗಿ ನಡೆದಿರುವುದು ಹೆಮ್ಮೆಯ ಸಂಗತಿ ಎಂದರು.



ಪ್ರಧಾನಮಂತ್ರಿಯವರ ಆಶಯದಂತೆ ‘ಹರ್ ಘರ್ ತಿರಂಗಾ’ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಪ್ರತಿಯೊಂದು ಮನೆಯಲ್ಲೂ ದೇಶಾಭಿಮಾನ ಹಾಗೂ ರಾಷ್ಟ್ರಪ್ರೇಮವನ್ನು ಬೆಳೆಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಸುನಿಲ್ ಆಳ್ವ ಹಾಗೂ ಪ್ರಸನ್ನ ಮಾರ್ತಾ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ರಾಜ್ಯ ಒಬಿಸಿ ಪ್ರಧಾನ ಕಾರ್ಯದರ್ಶಿ ಆರ್.ಸಿ. ನಾರಾಯಣ, ಯತೀಶ್ ಆರುವಾರು ಮತ್ತಿತರರು ಉಪಸ್ಥಿತರಿದ್ದು, ಕಾರ್ಯಕರ್ತರನ್ನು ಅಭಿನಂದಿಸಿದರು. ಪಕ್ಷದ ಪ್ರಮುಖರು ಹಾಗ ಕಾರ್ಯಕರ್ತರು ಭಾಗವಹಿಸಿದ್ದರು.










