ಜಿಲ್ಲಾ ಮಟ್ಟದ ಕರಾಟೆ: ಈಶ್ವರಮಂಗಲ ಶ್ರೀ ಗಜಾನನ ಆ.ಮಾ ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ

0

ಈಶ್ವರಮಂಗಲ : ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾಸಂಸ್ಥಾನ್ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ, ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾದ ಸದಸ್ಯ ಸಂಸ್ಥೆ ಇದರ ಆಶ್ರಯದಲ್ಲಿ ಶ್ರೀದೇವಿ ವಿದ್ಯಾಕೇಂದ್ರ ದೇವಿನಗರ ಪುಣಚದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಗಜಾನನ ಆಂಗ್ಲಮಾಧ್ಯಮ ಶಾಲೆ ಈಶ್ವರಮಂಗಲದ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನಗಳನ್ನು ತಮ್ಮದಾಗಿಸಿದ್ದಾರೆ.

17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ 9ನೇ ತರಗತಿಯ ಶನ್ಮಿತ ಪ್ರಥಮ, 17ರ ವಯೋಮಾನದ ಬಾಲಕರ ವಿಭಾಗದಲ್ಲಿ 10ನೇ ತರಗತಿಯ ಧನ್ವಿತ್ ಪ್ರಥಮ ಹಾಗೂ ವಿಷ್ಣುಪ್ರಸಾದ್ ದ್ವಿತೀಯ,14ರವಯೋಮಾನದ ಬಾಲಕಿಯರ ವಿಭಾಗದಲ್ಲಿ 8ನೇ ತರಗತಿಯ ಸಂಜನಾ ಪಕ್ಕಳ ದ್ವಿತೀಯ, 6ನೇ ತರಗತಿಯ ಸಾನ್ವಿ ದ್ವಿತೀಯ ಹಾಗೂ 6ನೇ ತರಗತಿಯ ವಿಸ್ಮಿತ ಜೆ ಕೆ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

LEAVE A REPLY

Please enter your comment!
Please enter your name here